Site icon Ullalavani

ಬಿ.ಸಿರೋಡ್ ಉದ್ವಿಗ್ನ: ಸಂಸದರಿಬ್ಬರು ಸೇರಿದಂತೆ ಹಲವರ ಬಂಧನ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಬಿ.ಸಿ.ರೋಡು: ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಕೊಲೆಯತ್ನಕ್ಕೆ ಸಂಬಂಧಿಸಿದಂತೆ ಹಿಂದೂ ಹಿತರಕ್ಷಣಾ ಸಮಿತಿ ಬಿ.ಸಿರೋಡಿನಲ್ಲಿ ಕರೆ ನೀಡಿದ್ದ ಪ್ರತಿಭಟನೆಯು ನಿಷೇದಾಜ್ಞೆಯ ನಡುವೆಯೂ ಸಾವಿರಾರು ಕಾರ್ಯಕರ್ತರ ಒಗ್ಗೂಡುವಿಕೆಯಿಂದ ಶುಕ್ರವಾರ ನಡೆಯಿತು. ಈ ಸಂದರ್ಭ ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್, ವಿದಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಕ್ಷನ್ 144 ಜಾರಿಯಲ್ಲಿದ್ದರು ಪ್ರತಿಭಟನೆಯನ್ನು ಕೈಗೊಂಡ ಹಿನ್ನಲೆಯಲ್ಲಿ 500 ಮಂದಿ ವಿರುದ್ಧ ಸೆಕ್ಷನ್ 143 ಹಾಗೂ 149 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರತಿಭಟನೆಗೂ ಮುನ್ನ ಸಂಸದೆ ಶೋಭಾ ಕರಂದ್ಲಾಜೆ, ಶರತ್ ಮೇಲೆ ದಾಳಿಯಾದ ಅವರ ಅಂಗಡಿಗೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಸೇರಿದಂತೆ ಕೊಲೆಗಳು ನಡೆಯುತ್ತಿದ್ದು ಈ ಬಗ್ಗೆ ಸರಿಯಾಗಿ ತನಿಖೆ ಮಾಡಲು ರಾಜ್ಯ ಸರಕಾರ ಬಿಡುತ್ತಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.

Exit mobile version