ಉಳ್ಳಾಲ ನ್ಯೂಸ್ ನೆಟ್ವರ್ಕ್
ಕುತ್ತಾರು: ಬೈಕಿನಲ್ಲಿ ಬಂದ ಆಗಂತುಕರಿಬ್ಬರು ಯುವಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಕುತ್ತಾರು ರಾಣಿಪುರದಲ್ಲಿ ಶನಿವಾರ ರಾತ್ರಿ ವೇಳೆ ಸಂಭವಿಸಿದೆ.

ಚಿರಂಜೀವಿ(24) ಅಪರಿಚಿತರಿಂದ ಹಲ್ಲೆಗೊಳಗಾಗಿದ್ದು, ಬೈಕಿನಲ್ಲಿ ಚಲಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಯುವಕನ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


