ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಉಳ್ಳಾಲ: ಟಿಪ್ಪರ್ ಲಾರಿ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಎಂಬಲ್ಲಿ ಸಂಭವಿಸಿದೆ.
ಕೇರಳದಿಂದ ಮಂಗಳೂರು ಕಡೆ ತೆರಳುತ್ತಿದ್ದ ಕಾರು ಎದುರಿನಲ್ಲಿ ಸಮುದ್ರ ತೀರಕ್ಕೆ ಕಲ್ಲು ಹಾಕುವ ಕಾಮಾಗಾರಿ ನಿರತ ಲಾರಿ ಉಚ್ಚಿಲ ಸಮೀಪ ತಿರುಗುತ್ತಿದ್ದಂತೆ ಹಿಂಬದಿಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.



