ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ತುಳು ಸಂಸ್ಕೃತಿಯಲ್ಲಿ ಆಷಾಡ ಮಾಸಕ್ಕೆ ವಿಷೇಶವಾದ ಸ್ಥಾನಮಾನವಿದೆ. ತಲಪಾಡಿಯ ಶಾರದಾವಿದ್ಯಾನಿಕೇತನ ವಸತಿ ಶಾಲೆಯಲ್ಲಿ ಜ್ಞಾನಾರ್ಜನೆಗೈಯುತ್ತಿರುವ ದೇಶ ವಿದೇಶಗಳ ವಿದ್ಯಾರ್ಥಿಗಳಿಗೆ ತುಳುನಾಡಿನ ವೈಶಿಷ್ಠ್ಯತೆಯನ್ನು ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಆಟಿ ಅಮಾವಾಸ್ಯೆಯ ದಿನದಂದು ವಿದ್ಯಾರ್ಥಿಗಳಿಗೆ ಹಾಲೆ ಮರದ ತೊಗಟೆಯ ಕಷಾಯವನ್ನು ನೀಡಿ ಅದರ ಮಹತ್ವವನ್ನು ತಿಳಿಸಲಾಯಿತು. ವಿದ್ಯಾರ್ಥಿಗಳಿಗೆ ಆಷಾಡ ಮಾಸದ ವಿಶೇಷ ಆಚರಣೆಯ ಕುರಿತಾದ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.
ಮದ್ಯಾಹ್ನ ವಿದ್ಯಾರ್ಥಿಗಳಿಗೆ ಆಟಿ ತಿಂಗಳ ವಿಶೇಷ ಖಾದ್ಯ, ತಿನಿಸುಗಳ ಮನೆ ಆಡಿಗೆಯ ಸವಿಯನ್ನು ಉಣಬಡಿಸಲಾಯಿತು. ಆ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡರು.


