UN Networks
ಉಳ್ಳಾಲ: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಮಾನತೆಯ ಬೀಜವನ್ನು ಬಿತ್ತುವ ದೃಷ್ಟಿಯಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿದ್ದು, ಈ ಮೂಲಕ ಬಡವ ಸಿರಿವಂತ ಎಂಬ ಭೇಧ ಭಾವ ಇಲ್ಲದೆ ಪ್ರತಿಯೊಬ್ಬರು ಸಮಾನತೆಯ ನೆಲೆಯಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎಂದು ಉಳ್ಳಾಲ ನಗರಸಭೆ ಪೌರಯುಕ್ತೆ ವಾಣಿ ಆಳ್ವ ಅಭಿಪ್ರಾಯಪಟ್ಟರು.
ಅವರು ಸಯ್ಯಿದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯಿದ್ ಮದನಿ ಪ್ರೌಢ ಶಾಲೆ ಹಳೆಕೋಟೆ ಉಳ್ಳಾಲ ಇದರ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಶಾಲಾ ವಠಾರದಲ್ಲಿ ಮಂಗಳವಾರ ನಡೆದ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಹೆತ್ತವರನ್ನು , ಶಿಕ್ಷಕರನ್ನು ಪ್ರೀತಿಸುವುದನ್ನು ಮೊದಲು ಕಲಿಯಬೇಕು. ಮೌಲ್ಯಾಧಾರಿತ ಶಿಕ್ಷಣದ ಜೊತೆಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತಂದುಕೊಡುವ ಜವಾಬ್ದಾರಿ ಪ್ರತಿಯೊಂದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆಯ ಭಾವನೆ ಮೂಡಬೇಕು ಎಂಬ ದೃಷ್ಟಿಯನ್ನು ಇಟ್ಟುಕೊಂಡು ಉಚಿತ ಸಮವಸ್ತ್ರವನ್ನು ನೀಡಿದ ಶಾಲಾಭಿವೃದ್ಧಿ ಸಮಿತಿ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಇದರ ಪ್ರಯೋಜನೆಯನ್ನು ಪಡೆದುಕೊಳ್ಳಬೇಕು. ಮುಂದೆ ಈ ಶಾಲೆಯಲ್ಲಿ ಕಾನೂನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ನಗರಸಭೆ ಸಹಕರಿಸುತ್ತದೆ ಎಂದರು.
ಉಳ್ಳಾಲ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಮೋನು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮಯ್ಯ, ಮಂಗಳೂರು ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್, ಉಳ್ಳಾಲ ಸಯ್ಯಿದ್ ಮದನಿ ಚಾರಿಟೆಬಲ್ ಟ್ರಸ್ಟ್‍ನ ಉಪಾಧ್ಯಕ್ಷ ಯು.ಕೆ.ಇಬ್ರಾಹಿಂ, ಉಳ್ಳಾಲ ಪುರಸಭೆ ಕೌನ್ಸಿಲರ್ ಫಾರೂಖ್ ಯು.ಹೆಚ್, ಲೇಖಕ ಅಬ್ದುಲ್ ಅಝೀಝ್ ಹಕ್ , ಟಿಪ್ಪು ಸುಲ್ತಾನ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಎಂ,ಹೆಚ್. ಮಲಾರ್ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜುಲ್ಫಾ ಕಾರ್ಯಕ್ರಮ ನಿರೂಪಿಸಿದರು, ಸಯ್ಯದ್ ಮದನಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಸ್ವಪ್ನ ವಂದಿಸಿದರು.