Site icon Ullalavani

ಬಿಜೆಪಿ ಸಭೆಯಲ್ಲಿ ಮಾತನಾಡಿದ ಉಸ್ತಾದರಿಗೆ ಬೆದರಿಕೆ ಕರೆ

UN NETWORKS

ಕೊಣಾಜೆ: ಬಿಜೆಪಿ ಮುಸ್ಲಿಂ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತಾದರೋರ್ವರಿಗೆ ಎರಡು ವಿದೇಶಿ ಕರೆಗಳ ಮೂಲಕ ಜೀವಬೆದರಿಕೆಯೊಡ್ಡಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಎರಡು ಅಪರಿಚಿತ ಧ್ವನಿ ಹಾಗೂ ನಾಲ್ಕು ಸಂಖ್ಯೆಯುಳ್ಳ ವಿದೇಶಿ ಕರೆ ಮೂಲಕ
ಬೆಳ್ಮ ಕಲ್ಪಾದೆ ಮತ್ತು ತಲಪಾಡಿ ಮದರಸ ಶಿಕ್ಷಕನಾಗಿರುವ ಎ.ಬಿ ಹನೀಫ್ ನಿಝಾಮಿ ಎಂಬವರಿಗೆ ಜೀವಬೆದರಿಕೆ ಒಡ್ಡಿರುವ ಎರಡು ದೂರವಾಣಿ ಕರೆಗಳು ಬಂದಿವೆ. ನಾಲ್ಕು ಸಂಖ್ಯೆಯುಳ್ಳ ನಂಬರಿನಲ್ಲಿ ಕರೆ ಮಾಡಿರುವ ಅಪರಿಚಿತರು ಉಸ್ತಾದರನ್ನು ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆಯನ್ನು ಒಡ್ಡಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೀಗ ಬಿಜೆಪಿ ಏರ್ಪಡಿಸಿದ ಸಭೆಯಲ್ಲಿ ಹಲವು ಧಾರ್ಮಿಕ ಮುಖಂಡರು ಭಾಗವಹಿಸಿರುವ ಕಾರ್ಯಕ್ರಮ ಹಲವು ವಿವಾದಗಳಿಗೆ ಕಾರಣವಾಗಿದೆ.

Exit mobile version