UN NETWORKS
ಕೊಣಾಜೆ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ಎಂದು ಮೂಡದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರು ಅಭಿಪ್ರಾಯ ಪಟ್ಟರು.
ಆರ್ಥಿಕ ಸಂಕಷ್ಟದಿಂದ ಯಾವುದೇ ವಿದ್ಯಾರ್ಥಿಯ ಶಿಕ್ಷಣ ಮೊಟಕುಗೊಳ್ಳಬಾರದೆಂಬ ಉದ್ದೇಶದಿಂದ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಶಿಕ್ಷಣಕ್ಕಾಗಿ ಬೃಹತ್ ಮೊತ್ತದ ಹಣವನ್ನು ವಿನಿಯೋಗಿಸುತ್ತಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದ ಅವರು ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.
ಉದ್ಯಮಿ ಪ್ರಸಾದ್ ರೈ ಕಲ್ಲಿಮಾರ್ ಅವರು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳಿವೆ. ಆದರೆ ಸ್ಪರ್ಧೆಯು ಆರೋಗ್ಯಕರವಾಗಿರಬೇಕು. ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು. ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹರೇಕಳ ಶಾಲಾ ಮುಖ್ಯೋಪಾಧ್ಯಾಯರಾದ ರವೀಂದ್ರ ರೈ ಹರೇಕಳ, ಶಾಲಾ ಎಸ್‍ಡಿಎಂಸಿಯ ನಿಕಟಪೂರ್ವ ಅಧ್ಯಕ್ಷ ಅಚ್ಯುತ ಗಟ್ಟಿ, ಉದ್ಯಮಿ ಕೆ.ಕೆ.ನಾಸೀರ್ ನಡುಪದವು ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಎಸ್.ರಾವ್, ಎಸ್‍ಡಿಎಂಸಿ ಅಧ್ಯಕ್ಷೆ ಭಾರತಿ ಶೆಟ್ಟಿ, ಮಂಗಳೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ಪಂಚಾಯಿತಿ ಸದಸ್ಯರಾದ ವೇದಾವತಿ ಗಟ್ಟಿ, ತಾಯಿರಾ ಬಾನು, ಪ್ರಕಾಶ್ ಶೆಟ್ಟಿ, ಮುತ್ತು ಶೆಟ್ಟಿ, ಭವ್ಯ, ಹಸೈನಾರ್, ಹಸನ್‍ಕುಂಞ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕ ರಾಧಾಕೃಷ್ಣ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪ್ರೆಸ್ಸಿ ಕುವೆಲ್ಲೋ ಸ್ವಾಗತಿಸಿ, ಸುಗುಣ ವಂದಿಸಿದರು.