UN NETWORKS
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ. ಮುರಲೀ ಮೋಹನ ಚೂಂತಾರು ಮಹಾತ್ಮರ ತ್ಯಾಗ, ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸುಮಾರು 40 ಜನ ಗೃಹರಕ್ಷಕರು ಉಪಸ್ಥಿತರಿದ್ದರು.


