Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಭೂಮಿಯನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ಮಾರುತ್ತಿರುವ ಪ್ರಧಾನಿ: ಕೆ. ನೀಲಾ

UllalaVaniBy UllalaVaniAugust 21, 2017Updated:August 21, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ : ಭಾರತ ಬಹು ಸಂಸ್ಕೃತಿಯನ್ನು ಹೊಂದಿರುವ ಕೃಷಿ ಪರಂಪರೆ ಇಂತಹ ದೇಶವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರ ಭೂಮಿಯನ್ನು ಕಾರ್ಪೋರೇಟ್  ಕಂಪೆನಿಗಳಿಗೆ ಮಾರುವ ಮೂಲಕ ದೇಶದಲ್ಲಿ ರುಷಿ ಪರಂಪರೆಯನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಜನಪರ ಚಿಂತಕಿ ಹಾಗೂ ಬರಹಗಾರ್ತಿ ಕೆ. ನೀಲಾ ಅಭಿಪ್ರಾಯಪಟ್ಟರು.

0ad72909-c110-46c7-9b45-8e2badca5499

5ef43dcb-a493-4bf0-a93f-482f8af07876 8bf96be0-68da-4048-b0e6-ba80974aa8d9

107addf9-05d5-4d75-abe2-4d6c613b806f 0955d158-85c8-470f-a629-2eade3b8559b 9370b9be-8cbf-4177-803a-84ccf4425c75

a1ad5656-6315-443d-b424-d3cc443f69c8

afa9a8c3-688a-4deb-b4db-7c32aebb34b5

c876b4ce-7583-47b7-a165-882692bd8698`ಅಬ್ಬಕ್ಕನ ಮಡಿಲು ಸೌಹಾರ್ದತೆಯ ಕಡಲು’ ಅರಿವು, ಸೌಹಾರ್ದತೆ, ಮುನ್ನಡೆಗಾಗಿ ಘೋಷ ವಾಕ್ಯದೊಂದಿಗೆ ಕುತ್ತಾರಿನ ಮುನ್ನೂರು ಯುವಕ ಮಂಡಲದ ಸಭಾಂಗಣದಲ್ಲಿ ಭಾನುವಾರ ನಡೆದ 13 ನೇ ಉಳ್ಳಾಲ ವಲಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಭಾರತದ ಆನಾದಿ ಕಾಲದಿಂದಲೂ ಕೃಷಿ ಆಧಾರಿತ ದೇಶವಾಗಿದೆ. ಜಗದ ಜೀವರಾಶಿಗೆ ಅನ್ನ ನೀಡುವ ಕೃಷಿ ಸಂಸ್ಕೃತಿಯನ್ನು ಮೋದಿ ನೇತೃತ್ವದಲ್ಲಿ ಅದಾನಿ ಅಂಬಾನಿಗಳು ಕೂತು ತಿನ್ನುವ ರುಷಿ ಪರಂಪರೆಯೆಡೆಗೆ ಕೊಂಡೊಯ್ಯುತ್ತಿದ್ದಾರೆ. ದೇಶದ ಕೃಷಿ ಭೂಮಿಗಳನ್ನು ಕಾರ್ಪೋರೇಟ್  ಸಂಸ್ಥೆಗಳಿಗೆ ಪರಭಾರೆಯಾಗುತ್ತಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಯುವಜನತೆ ಹಣಕ್ಕಾಗಿ ತಪ್ಪು ದಾರಿಗಳನ್ನು ಹುಡುಕುತ್ತಿದ್ದಾರೆ. ಕೇಂದ್ರ ಸರಕಾರದ ಸರ್ವೇಯಂತೆ ದೇಶದಲ್ಲಿ ಶೇ. 71ರಷ್ಟು ಜನರ ದೈನಂದಿನ ಆದಾಯ 20 ರೂ.ಗಿಂತ ಕಡಿಮೆಯಾಗಿದೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಉತ್ತೇನ ಎಂದು ಯುವಕರ ಮತವನ್ನು ಸೆಳೆದಿದ್ದ ಮೋದಿ ನೇತೃತ್ವದ ಕೇಂದ್ರ ಸರಕಾರ ಆಡಳಿತಕ್ಕೆ ಬಂದ ಮೂರು ವರ್ಷದಲ್ಲಿ ಸುಮಾರು 70 ಲಕ್ಗಷದಷ್ಟು ಜನರು ಕೆಲಸ ಕಳೆದುಕೊಂಡಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವುದು ಕಟುಕ ಸರಕಾರಗಳು. ಇಂದು ಆಡಳಿತ ನಡೆಸುತ್ತಿರುವವರು ದೇಶಭಕ್ತಿಯ ಬಗ್ಗೆ ಪಾಠ ಮಾಡುವ ಮೂಲಕ ಬಹು ಸಂಸ್ಕೃತಿಯ ದೇಶವನ್ನು ಒಡೆಯುವ ಮೂಲಕ ದೇಶ ಭಕ್ತಿಯ ಹುಸಿ ನಾಟಕವಾಡುತ್ತಿದ್ದಾರೆ. ಆದರೆ ಇವರ ಪಕ್ಷದ ಹಿರಿಯರು ಒಬ್ಬರೇ ಒಬ್ಬರು ಸ್ವಾತಂತ್ರ ಚಳವಳಿಯಲ್ಲಿ ಬಲಿದಾನ ಮಾಡಿಲ್ಲ. ದೇಶದಲ್ಲಿ ಇಂದು ನಡೆಯುತ್ತಿರುವ ಅಲ್ಪಸಂಖ್ಯಾತ ಕೋಮುವಾದ ಮತ್ತು ಬಹು ಸಂಖ್ಯಾತ ಕೋಮುವಾದ ದೇಶಕ್ಕೆ ಬಹು ದೊಡ್ಡ ಅಪಾಯದ ಗಂಟೆಯಾಗಿದ್ದು, ಇದನ್ನು ಮೀರಿ ಭಾರತದಲ್ಲಿ ಬಹು ಸಂಸ್ಕೃತಿಯನ್ನು ಗಟ್ಟಿಗೊಳಿಸುವ ತಾಕತ್ತು ಇಂದಿನ ಯುವ ಸಮುದಾಯದಲ್ಲಿದ್ದು ಇಂತಹವರ ವಿರುದ್ಧ ಯುವಜನತೆ ಒಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದರು.

ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಆರ್ಥಿಕ ನೀತಿಯಿಂದಾಗಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಇದರ ವಿರುದ್ಧ ಯುವ ಜನತೆ ಹೋರಾಟ ನಡೆಸಬೇಕಾಗಿದೆ . ಜಿಲ್ಲೆಯಲ್ಲಿ ಸೌಹಾರ್ಧ ಹಿಂದಿನಿಂದಲೂ ಇದೆ. ತುಳುನಾಡಿನಲ್ಲಿ ಹುಟ್ಟಿರುವ ಎಲ್ಲಾ ಮುಸ್ಲಿಮರಾಗಲಿ ಕ್ರೈಸ್ತರಾಗಲಿ ಏಳೆಂಟು ತಲೆಮಾರಿನಲ್ಲಿ ತುಳುವರೇ ಆಗಿದ್ದರು. ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಅಣ್ಣ ತಮ್ಮಂದಿರು ಆದರೆ ಅಧಿಕಾರದಲ್ಲಿರುವವರು ತಮ್ಮ ಸ್ವಾರ್ಥ ಸಾಧನೆಗಾಗಿ ಸೌಹಾರ್ಧತೆಯನ್ನು ಕೆಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಅದರಲ್ಲೂ ನಿರುದ್ಯೋಗಿ ಯುವಕರು ಒಗ್ಗಟ್ಟಾಗಿ ಉದ್ಯೋಗಕ್ಕಾಗಿ ಹೋರಾಟ ಮಾಡುತ್ತಾರೆ ಎನ್ನುವ ನಿಟ್ಟಿನಲ್ಲಿ ಆಡಳಿತ ಶಾಹಿಗಳು ದೇಶಪ್ರೇಮದ ಹೆಸರಿನಲ್ಲಿ ಧರ್ಮದ ಆಧಾರದಲ್ಲಿ ಯುವಕರನ್ನು ಸಂಘಟಿಸಿ ಗಲಭೆ ನಡೆಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ ಯುವಜನತೆಯನ್ನು ಉತ್ತಮ ದಾರಿಗೆ ತರುವ ನಿಟ್ಟಿನಲ್ಲಿ ಅವರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಯಾವುದೇ ಜನಪ್ರತಿನಿಧಿಗಳು ಚಿಂತನೆ ನಡೆಸುತ್ತಿಲ್ಲ ಎಂದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮಹಾಬಲ ಟಿ.ದೆಪ್ಪೆಲಿಮಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಗಂಗಾಧರ್ ಉಳ್ಳಾಲ್, ಡಿವೈಎಫ್‍ಐ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, ಕೋಶಾಧಿಕಾರಿ ರಫೀಕ್ ಹರೇಕಳ, ಎಸ್‍ಎಫ್‍ಐ ಜಿಲ್ಲಾ ಅಧ್ಯಕ್ಷ ನಿತಿನ್ ಕುತ್ತಾರ್, ಡಿವೈಎಫ್ ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ವಲಯ ಸಮಿತಿ ಉಪಾಧ್ಯಕ್ಷರಾದ ರೋಹಿದಾಸ್ ಭಟ್ನಗರ, ಹರೀಶ್ ಕೆರೆಬೈಲ್ ಉಪಸ್ಥಿತರಿದ್ದರು.

ಸಮ್ಮೇಳನ ಪೂರ್ವ ಭಾವಿಯಾಗಿ ದೇರಳಕಟ್ಟೆಯ ಯೇನೆಪೋಯ ಆಸ್ಪತ್ರೆ ಬಳಿಯಿಂದ ಸಮ್ಮೇಳನ ನಡೆಯುವ ಮುನ್ನೂರು ಯುವಕ ಮಂಡಲದ ಸಭಾಭವನದವರೆಗೆ ಯುವಜನರ ವರ್ಣರಂಜಿತ ಮೆರವಣಿಗೆ ನಡೆಯಿತು.

ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಜೊತೆ ಕಾರ್ಯದರ್ಶಿ ಸುನಿಲ್ ತೇವುಲ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಜೀವನ್ ರಾಜ್ ಕುತ್ತಾರ್ ಪ್ರಸ್ತಾವನೆಗೈದರು. ಜೊತೆ ಕಾರ್ಯದರ್ಶಿ ರಝಾಕ್ ಮೊಂಟೆಪದವು ನಿರೂಪಿಸಿದರು. ಅಧ್ಯಕ್ಷ ಅಶೋಕ್ ಶೆಟ್ಟಿ ಚೆಂಬುಗುಡ್ಡೆ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

March 12, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026

ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಅಶೋಕ್ ಉಳ್ಳಾಲಬೈಲ್ ನಿಧನ

March 11, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮರ್ಪಕ ಕಾನೂನು ಜಾರಿ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧ್ಯವಾಗುತ್ತಿಲ್ಲ;ಶೀನ ಶೆಟ್ಟಿ

By UllalaVaniMarch 12, 20260

ಉಳ್ಳಾಲ: ಮಾದರಿ ಗ್ರಾಮ ಅಭಿಯಾನ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಹಾಗೂ ರಾಷ್ಟ್ರೀಯ ನಿರ್ಮಲ ಗ್ರಾಮ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ..!

March 12, 2026

ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಗಳ ಅವಧಿಯಲ್ಲಿ ಆರೋಪಿ ಅಂದರ್..!

March 11, 2026

ಮಹಿಳಾ ದಿನದ ಪ್ರಯುಕ್ತ ಕೊಲ್ಯದಲ್ಲಿ ಮಹಿಳಾ ಸಾಧಕರನ್ನು ಸನ್ಮಾನ

March 11, 2026
1 2 3 … 1,828 Next
Automatic YouTube Gallery

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
Now Playing
ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ಜನಶಿಕ್ಷಣ ಟ್ರಸ್ಟ್ ಇದರ ಜಂಟಿ ಸಹಯೋಗದಲ್ಲಿ

ಪ್ಲಾಸ್ಟಿಕ್ -ಕ್ಯಾನ್ಸರ್ ವಿಚಾರ ಸಂಕಿರಣ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
Now Playing
|| WOMEN'S DAY|| ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ `ಮಹಿಳಾ ದಿನಾಚರಣೆ'
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ; ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ ಅಶ್ವಿನ್ ನೇತೃತ್ವದಲ್ಲಿ ಮಹಿಳಾ ದಿನಾಚರಣೆ'

ಕಾರ್ಯಕ್ರಮದಲ್ಲಿ ಮಹಿಳಾ ಸಾಧಕರಿಗೆ ಅಭಿನಂದನೆ, ಆಟೋಟ ಸ್ಪರ್ಧೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d