Site icon Ullalavani

ಕಣಚೂರುನಲ್ಲಿ `ಕಿಮ್ಸ್ ಕಲ್‍ರವ್’- 2017

UN NETWORKS

ಕಣಚೂರು: ದೇರಳಕಟ್ಟೆಯ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಕಾಲೇಜಿನ ಆಶ್ರಯದಲ್ಲಿ `ಕಿಮ್ಸ್ ಕಲ್‍ರವ್’- 2017 ಅಂತರ್ ಕಾಲೇಜ್ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಉದ್ಘಾಟನೆಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗದ ಪ್ರೋ  ರವಿಶಂಕರ್ ಮಾತನಾಡಿ ವಿದ್ಯಾರ್ಥಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸುವುದರ ಮುಖ್ಯ ಉದ್ದೇಶವನ್ನು ವಿದ್ಯಾರ್ಥಿಗಳು ಮೊದಲು ತಿಳಿದು ಕೊಳ್ಳಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಸಾಮಾನ್ಯ. ಆದರೆ ನಮ್ಮ ಪ್ರಯತ್ನವನ್ನು ಮುಂದುವರಿಸುತ್ತಲೇ ಇರಬೇಕು. ಆಗ ಭವಿಷ್ಯದಲ್ಲಿ ಗೆಲುವು ನಿಶ್ಚಿತ. ಅದೇ ಜೀವನದ ಸಿದ್ಧಾಂತ ಎಂದು ನುಡಿದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ವಿನೀತಾ ಮಥಾಯಸ್, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ಆನಂದಿ ಹಾಗೂ ಪ್ರಿಸ್ಕೂಲ್‍ನ ಮುಖ್ಯ ಶಿಕ್ಷಕಿ ಲಿನೇಟ್ ಡಿಸೋಜ ಉಪಸ್ಥಿತರಿದ್ದರು.

ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೋ  ಇಕ್ಬಾಲ್ ಅಹಮದ್ ಯು.ಟಿ. ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಮುಬೀನ್ ತಾಜ್ ಕಾರ್ಯಕ್ರಮ ನಿರೂಪಿಸಿದರು. ಬಿ.ಸಿ.ಎ. ವಿಭಾಗದ ಉಪನ್ಯಾಸಕಿ ಸಫೀನಾ ವಂದಿಸಿದರು.

Exit mobile version