UN NETWORKS
ಉಳ್ಳಾಲ: ಮಂಗಳೂರಿನ ಶಾರದಾ ವಿದ್ಯಾಲಯದಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾಟದಲ್ಲಿ ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಒಟ್ಟು 7 ಚಿನ್ನ, 6 ಬೆಳ್ಳಿ ಪದಕ ಹಾಗೂ 2 ಕಂಚಿನ ಪದಕ ಪಡೆದಿರುತ್ತಾರೆ.
ಪಂದ್ಯಾವಳಿಯಲ್ಲಿ ಪಾಲ್ಗೊಂಡ 11ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 10ನೇ ತರಗತಿಯ ರೋಹಿತ್ ಪಾಲ್ ಹಾಗೂ 8ನೇ ತರಗತಿಯ ಸನ್ನಿಧಿ ವೈಯಕ್ತಿಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.