Site icon Ullalavani

ಕಾರು ಬೈಕ್ ಅಪಘಾತ : ಗಾಯಾಳು ಮೃತ್ಯು

UN NETWORKS

ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.

ಕುಂಪಲ ಚಿತ್ರಾಂಜಲಿನಗರ ನಿವಾಸಿ ರಾಜೇಶ್ ಎಂಬವರ ಪುತ್ರ ವಿಮಲೇಶ್ (28) ಮೃತರು. ಮಂಗಳೂರಿನಲ್ಲಿ ಶನಿವಾರ ನಡೆದಿದ್ದ ಗಣೇಶೋತ್ಸವದಲ್ಲಿ ಭಾಗವಹಿಸಿದ್ದ ವಿಮಲೇಶ್, ಮತ್ತವರ ಸ್ನೇಹಿತರುಗಳಾದ ಮಿಥುನ್ , ಮನೋಹರ್ ಎರಡು ಬೈಕಿನಲ್ಲಿ ಬರುತ್ತಿದ್ದರು. ವಿಮಲೇಶ್ ಓರ್ವನೇ ಒಂದು ಬೈಕಿನಲ್ಲಿದ್ದು, ಇದೇ ವೇಳೆ ಹಿಂಬದಿಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ವಿಮಲೇಶ್ ಇದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ವಿಮಲೇಶ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬುಧವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಆನ್ ಲೈನ್ ಮಾರುಕಟ್ಟೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ತಂದೆ ತಾಯಿ ಮತ್ತು ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Exit mobile version