UN NETWORKS
ಉಳ್ಳಾಲ: ಕಾರೊಂದು ಸ್ಕೂಟರಿಗೆ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಮಂಗಳವಾರ ಸಂಭವಿಸಿದೆ.
ತಲಪಾಡಿ ನಿವಾಸಿ ಪ್ರಜ್ವಲ್ (19) ಕಾಲಿಗೆ ಗಂಭೀರ ಗಾಯವಾಗಿದ್ದು, ಸವಾರ ಕುಂಪಲ ನಿವಾಸಿ ಧನುಷ್ (22) ಎಂಬವರಿಗೂ ಗಾಯವಾಗಿದೆ. ವಿದ್ಯಾರ್ಥಿಗಳಾಗಿರುವ ಇಬ್ಬರು ಉಚ್ಚಿಲದ ಪೆಟ್ರೋಲ್ ಪಂಪಿನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದಂತೆ ಕೇರಳ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎಂದು ಗಾಯಾಳುಗಳು ತಿಳಿಸಿದ್ದಾರೆ. ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.