Site icon Ullalavani

ಸೆ.22 : ಅಸೈಗೋಳಿಯಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ

UN NETWORKS

ತೊಕ್ಕೊಟ್ಟು: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ` ಸಾಮರಸ್ಯ-ಸಂಘಟನೆ- ಅಭಿವೃದ್ಧಿ ಕೊಟ್ಟ ಮಾತು ದಿಟ್ಟ ಹೆಜ್ಜೆ’ ಧ್ಯೇಯ ವಾಕ್ಯದಡಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಸೆ.22 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ತಿಳಿಸಿದ್ದಾರೆ.

ತೊಕ್ಕೊಟ್ಟುವಿನಲ್ಲಿ ಬುಧವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಮುಡಿಪು ಬ್ಲಾಕ್ ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೇರಳದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದ್ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಿದ್ಧರಾಮಯ್ಯ ನೇತೃತ್ವದ ಸರಕಾರದ ಸಾಧನೆ ಮತ್ತು ಕೇಂದ್ರದ ಮೋದಿ ಸರಕಾರದ ವೈಫಲ್ಯತೆಯನ್ನು ತಿಳಿಸಲಿದ್ದಾರೆ. ಮುಂಬರುವ ಚುನಾವಣೆಯನ್ನು ಮುಂದಿಟ್ಟು ಆಯೋಜಿಸಲಾದ ಸಮಾವೇಶದಲ್ಲಿ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಮಾತನಾಡಿ ` ಸೆ.23 ರಿಂದ ರಾಜ್ಯ ಸರಕಾರದ ಅಭಿವೃದ್ಧಿ ಕೆಲಸಗಳ ಕುರಿತು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಪಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ಸುದ್ಧಿಗೋಷ್ಠಿಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಸುರೇಶ್ ಭಟ್ನಗರ, ಮುಸ್ತಾಫ ಹರೇಕಳ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್, ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಸಮೀರ್ ಪಜೀರ್ ಹಾಗೂ ಹಿರಿಯ ಮುಖಂಡ ದಾಮೋದರ್ ಉಳ್ಳಾಲ್ ಉಪಸ್ಥಿತರಿದ್ದರು.

Exit mobile version