UN NETWORKS
ಕೋಟೆಕಾರು: ಹಿ0ದೂಗಳಾದ ಎಲ್ಲರೂ ಇನ್ನಷ್ಟೂ ಧಾರ್ಮಿಕ ಚಿಂತನೆಗಳನ್ನು ಮಾಡುವುದರ ಮೂಲಕ ಮಕ್ಕಳಲ್ಲಿ ಧಾರ್ಮಿಕ ಮನೋಭಾವನೆ ಮೂಡಿಸುವ ಕೆಲಸ ಮಾಡಬೇಕಾಗಿದೆ , ಸರಕಾರ ದೇವಸ್ಥಾನ ದೈವಸ್ಥಾನಗಳಿ0ದ ಬರುವ ಆದಾಯಗಳನ್ನು ಶ್ರದ್ಧಾ ಕೇ0ದ್ರಗಳಿಗೆ ಸರಿಯಾಗಿ ಬಳಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ ಹೇಳಿದ್ದಾರೆ.
ಧಾರ್ಮಿಕ ಪರಿಷತ್ ನ ಸದಸ್ಯರಾದ ಪಿ.ಕೃಷ್ಣ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ರವೀ0ದ್ರ ಶೆಟ್ಟಿ ಉಳಿದೊಟ್ಟು ಅಧ್ಯಕ್ಷತೆ ವಹಿಸಿದ್ದರು.
ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ , ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು , ರಾಮರಾಜ ಕ್ಷತ್ರೀಯ ಸೇವಾ ಸಂಘ ಹೊಸದುರ್ಗದ ಅಧ್ಯಕ್ಷ ಹೆಚ್.ಬಿ.ಪ್ರಭಾಶಂಕರ ರಾವ್ ಉಪಸ್ಥಿತರಿದ್ದರು.
ಮಠದ ಧರ್ಮಾಧಿಕಾರಿಗಳಾದ ಸತ್ಯಶಂಕರ ಬೊಳ್ಳವ ಪ್ರಸ್ತ್ತಾವನೆಗೈದರು, ಮಹಿಳಾ ವಿಭಾಗ ಅಧ್ಯಕ್ಷೆ ಸುಷ್ಮಾ ಜನಾರ್ಧನ್ ಸ್ವಾಗತಿಸಿದರು, ಕಾರ್ಯದರ್ಶಿ ಸೀತಾರಾಮ ಕೊಪ್ಪಲು ವಂದಿಸಿದರು, ಜೊತೆ ಕಾರ್ಯದರ್ಶಿ ಆನಂದ ಶೆಟ್ಟಿ, ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರ್ವಹಿಸಿದರು.