UN NETWORKS
ಕೊಣಾಜೆ: ವಿಶ್ವಮಂಗಳ ವಿದ್ಯಾಸಂಸ್ಥೆ ಕೊಣಾಜೆ ಇಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಸಂಸ್ಧೆಯ ಸ್ಕೌಟ್ ಮತ್ತು ಗೈಡ್ಸ್‍ನ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು.
ಪ್ರೌಢಶಾಲಾ ವಿದ್ಯಾರ್ಥಿ ಎಡನ್ ಡಿಸೋಜಾರವರು ದಿನದ ಮಹತ್ವದ ಬಗ್ಗೆ ಮಾತಾನಾಡಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಇಸ್ಮಾಯಿಲ್ ಬಿ, ಕಾರ್ಯದರ್ಶಿಗಳಾದ ಭೋಜ ಪೂಜಾರಿ, ಖಜಾಂಚಿಯಾದ ಡಾ.ಪರಮೇಶ್ವರ್ ಹಾಗೂ ಸದಸ್ಯರು, ರಕ್ಷಕ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರೌಢಶಾಲಾ ಮುಖ್ಯಶಿಕ್ಷಕಿ ಪ್ರಿಯಾ ಎನ್. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೋಭಾವತಿ ಹಾಗೂ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಪೂರ್ಣಿಮಾ ಡಿ. ಶೆಟ್ಟಿ, ಶಿಕ್ಷಕ ಶಿಕ್ಷಕೇತರ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು. ದಿನದ ಅಂಗವಾಗಿ ಶಾಲಾ ಪರಿಸರ ಶುಚಿತ್ವ ಮಾಡಲಾಯಿತು.



