Site icon Ullalavani

ಉಳ್ಳಾಲ ನಗರಸಭೆ ಕಾಂಗ್ರೆಸ್ ಅಧ್ಯಕ್ಷರಾಗಿ ಬಾಝಿಲ್ ಡಿಸೋಜ ಆಯ್ಕೆ

UN NETWORKS

ಉಳ್ಳಾಲ: ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷ ರಾಗಿ ಬಾಝಿಲ್ ಡಿಸೋಜ ಅವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ನೇಮಕ ಮಾಡಿದ್ದಾರೆ.

25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದುಕೊಂಡು, ಉಳ್ಳಾಲ ಬ್ಲಾಕ್ ಯುವಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಪುರಸಭೆಗೆ ಎರಡು ಬಾರಿ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಗೊಂಡಿದ್ದರು.

ಚೆಂಬುಗುಡ್ಡೆ ವಾರ್ಡಿನಿಂದ ಸ್ಪರ್ಧಿಸಿ ಮೂರು ಬಾರಿ ಸದಸ್ಯರಾಗಿ ಆಯ್ಕೆಗೊಂಡ ಅವರು ಉಳ್ಳಾಲ ಪುರಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಉಳ್ಳಾಲ ಪುರಸಭೆಯ ಅಧ್ಯಕ್ಷರೂ ಆಗಿದ್ದರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಇವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.

 

Exit mobile version