Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಅ.21,22 ತೊಕ್ಕೊಟ್ಟು ಭಗತ್‍ಸಿಂಗ್ ಸೇವಾ ಪ್ರತಿಷ್ಠಾನದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ

UllalaVaniBy UllalaVaniOctober 19, 2017Updated:October 19, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS
ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ಆಯೋಜಿಸುವ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ ( ಗೂಡುದೀಪ ಸ್ಪರ್ಧೆ ) ಪ್ರತಿಷ್ಠಾನದ ದಶಮ ಸಂಭ್ರಮದ ಪ್ರಯುಕ್ತ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಅ.21 ಮತ್ತು ಅ.22 ರಂದು ತೊಕ್ಕೊಟ್ಟು ಡಾ.ಬಿ.ಆರ್. ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿದೆ ಎಂದು ಭಗತ್‍ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ದಾರೆ.
ತೊಕ್ಕೊಟ್ಟು ಖಾಸಗಿ ಹೊಟೇಲಿನಲ್ಲಿ ಗುರುವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.

IMG_20171019_105427

8102e229-da65-46d0-9e25-a65810a4ccbf

eb03622a-fb94-461b-8388-bae63ac1d9f3

ಅ. 21 ಶನಿವಾರ ಸಂಜೆ ಸಭಾ ಕಾರ್ಯಕ್ರಮ ಬಳಿಕ 6.30ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಟಾಪ್ ಸಿಂಪೋನಿ ತಂಡದಿಂದ `ನೃತ್ಯ ವೈಭವ’ ಕಾರ್ಯಕ್ರಮ, ಉದ್ಘಾಟನಾ ಸಮಾರಂಭವನ್ನು ಶೃಂಗೇರಿ ಶಾಖಾ ಮಠದ ಧರ್ಮದರ್ಶಿ ಸತ್ಯಶಂಕರ ಬೊಳ್ಳಾವ ನೆರವೇರಿಸಲಿದ್ದಾರೆ. ಶ್ರೀ ಭಗವತಿ ಕ್ಷೇತ್ರ ಉಳ್ಳಾಲ ಇದರ ಆಡಳಿತ ಮೊಕ್ತೇಸರ ಗಂಗಾಧರ್ ಉಳ್ಳಾಲ್ ಹಾಗೂ ಗೌರವ ಉಪಸ್ಥಿತಿಯಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದು, 9 ಗಂಟೆಗೆ ಖುಷಿ ಮೆಲೋಡೀಸ್ ಮಂಗಳೂರು ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಭಗತ್ ಸಿಂಗ್ ಸಾಧಕ ಪ್ರಶಸ್ತಿಯನ್ನು ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಕಾರ್ಯಾಧ್ಯಕ್ಷ ಸತೀಶ್ ಕರ್ಕೇರ ಇವರಿಗೆ ಪ್ರಧಾನ ಮಾಡಲಿದ್ದು, ತೊಕ್ಕೊಟ್ಟು ಪರಿಸರದಲ್ಲಿ 50 ವರ್ಷಕ್ಕೂ ಮಿಕ್ಕಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಹಲವರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.

ಅ. 22ರಂದು ರವಿವಾರ ಸಂಜೆ 5 ಗಂಟೆಗೆ ಗೂಡುದೀಪ ನೋಂದಾವಣೆ ನಡೆಯಲಿದ್ದು, ಬಳಿಕ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪಿಕಾಡ್ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್ ನೆರವೇರಿಸಲಿದ್ದು, ಮುಡಿಪು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾಜಾರಾಮ್ ಭಟ್ ವಹಿಸಲಿದ್ದು, 9 ಗಂಟೆಗೆ `ಸತ್ಯ ಏರೆಗ್ಲಾ ಗೊತ್ತುಜ್ಜಿ’ ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಗೂಡುದೀಪ ಸ್ಪರ್ಧೆ : ಗೂಡುದೀಪ ಸ್ಪರ್ಧೆಯು ಆಧುನಿಕ ಹಾಗೂ ಸಾಂಪ್ರದಾಯಿಕ ವಿಭಾಗಗಳಲ್ಲಿ ನಡೆಯಲಿದ್ದು, ಎರಡು ವಿಭಾಗಕ್ಕೂ ಪ್ರಥಮ -6000 ನಗದು, ದ್ವಿತೀಯ -4000, ತೃತೀಯ – 3000, ಚತುರ್ಥ – 2000 ಬಹುಮಾನ ಹಾಗೂ ಸ್ಮರಣಿಕೆ ಮತ್ತು ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು.

ತುಳಸಿಕಟ್ಟೆ ಫೋಟೊ ಸ್ಪರ್ಧೆ : ಅಂದದ ತುಳಸಿಕಟ್ಟೆ ಸ್ಪರ್ಧೆ ನಡೆಯಲಿದ್ದು, ತಮ್ಮ ಮನೆಯ ತುಳಸಿಕಟ್ಟೆಯ ಫೋಟೊವನ್ನು ವಾಟ್ಸ್ಯಾಪ್ ನಂ. 9341356516 ಮೊಬೈಲ್ ನಂಬರಿಗೆ ನ. 4ರೊಳಗೆ ಕಳುಹಿಸಿಕೊಡಬೇಕಾಗಿದೆ.

ಸಾಮಾಜಿಕ ಚಟುವಟಿಕೆಗಳು : ಬಡಜನರ ಸೇವೆಗಾಗಿ ಮೃತ್ಯುಂಜಯ ಆಂಬ್ಯುಲೆನ್ಸ್ ಸೇವಾ ಯೋಜನೆ 10 ವರ್ಷಗಳಿಂದ ನಡೆಯುತ್ತಾ ಬಂದಿದೆ. 16 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಳೆದ 7 ವರ್ಷಗಳಲ್ಲಿ ಸುಮಾರು 1500ಕ್ಕೂ ಹೆಚ್ಚು ಅಂತ್ಯಸಂಸ್ಕಾರದ ಕೆಲಸದಲ್ಲಿ ಆಂಬ್ಯುಲೆನ್ಸ್ ಸಹಕಾರಿಯಾಗಿದೆ. ಪ್ರತಿಷ್ಠಾನ ರಾಷ್ಟ್ರ ಚಿಂತನೆಯ ಚಟುವಟಿಕೆಗಳ ಭಾಗವಾಗಿ ನವಮಂಗಳೂರು ನಿರ್ಮಾಣದ ಶಿಲ್ಪಿ ಶ್ರೀನಿವಾಸ ಮಲ್ಯರ ದಿನಾಚರಣೆ, ಹುತಾತ್ಮ ದಿನಾಚರಣೆ, ಗುರುವಂದನಾ ಕಾರ್ಯಕ್ರಮ, ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರಮದಾನ, ರಕ್ತದಾನ ಹಾಗೂ ಅಸಹಾಯಕರಿಗೆ ನೆರವು, ಮಾನಸಿಕ ಅಸ್ವಸ್ಥೆ ಮಹಿಳೆಗೆ ನೆರವು ಮುಂತಾದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.

ಸುದ್ಧಿಗೋಷ್ಠಿಯಲ್ಲಿ ಗೌರವ ಸಲಹೆಗಾರ ಆನಂದ .ಕೆ.ಅಸೈಗೋಳಿ, ಮಾಧ್ಯಮ ಪ್ರಚಾರದ ಪ್ರವೀಣ್.ಎಸ್.ಕುಂಪಲ , ಪ್ರ.ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ರಾಕೇಶ್ ಬೈಪಾಸ್, ಪ್ರ.ಸಂಘಟನ ಕಾರ್ಯದರ್ಶಿ ಪುರುಷೋತ್ತಮ ಕಲ್ಲಾಪು ಭಾಗವಹಿಸಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ವೈಭವದ ವರಮಹಾಲಕ್ಷ್ಮಿ ಪೂಜೆ

August 29, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಪಟ್ಟೋರಿ ಮಸೀದಿ ವತಿಯಿಂದ ವಿಜೃಂಭಣೆಯ ಈದ್ ಮೀಲಾದ್

By UllalaVaniAugust 29, 20260

ಉಳ್ಳಾಲ; ಪಟ್ಟೋರಿ ರಹ್ಮಾನಿಯಾ ಜುಮಾ ಮಸೀದಿ ವತಿಯಿಂದ ಈದ್ ಮೀಲಾದ್ ಸಮಾರೋಪ ಕಾರ್ಯಕ್ರಮ ಹಾಗೂ ಮದ್ರಸ ವಿದ್ಯಾರ್ಥಿಗಳ ”ಇಷ್ಖೇ ಮದೀನಾ…

ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠ: ಇದು ಕೇವಲ ವಕೀಲರ ಬೇಡಿಕೆಯಲ್ಲ, ನ್ಯಾಯಕ್ಕೆ ಜನರ ಸಂವಿಧಾನಾತ್ಮಕ ಹಕ್ಕಿನ ಪ್ರಶ್ನೆ

August 29, 2026

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

August 29, 2026

ಗ್ರಾಹಕರಿಗೆ ಉತ್ತಮ ಸೇವೆ ಮೆಸ್ಕಾಂ ಮೆಕ್ಯಾನಿಕ್‌ ಸಂತೋಷ್‌ ಲೋಬೋ ಅವರಿಗೆ ಸಚಿವರಿಂದ ಸನ್ಮಾನ

August 29, 2026
1 2 3 … 2,080 Next
Automatic YouTube Gallery

ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್

ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
Now Playing
ಪೊಲೀಸ್ ರೂಟ್ ಮಾರ್ಚ್ | ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ...
ಅಹಿತಕರ ಘಟನೆಗಳು ಸಂಭವಿಸದಂತೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಠಾಣಾ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ದೇರಳಕಟ್ಟೆ ನಿತ್ಯಾನಂದನಗರದಿಂದ ಕುತ್ತಾರು ಶ್ರೀ ರಾಜರಾಜೇಶವರಿ ಸಿದ್ಧಿವಿನಾಯಕ ದೇವಸ್ಥಾನದವರೆಗೆ ನಡೆಯಿತು. ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃಥ್ವದಲ್ಲಿ ಸಬ್‌ ಇನ್ಸ್‌ ...
ಪೆಕ್ಟರ್‌ ಗಳಾದ ರೇವಣ್ಣ ಸಿದ್ಧಯ್ಯ , ಸಂತೋಷ್ ಹಾಗೂ ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
Now Playing
ಗ್ರಾಮಚಾವಡಿ: ಬಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ...
ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನೋತ್ಸೋವ

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version