UN NETWORKS
ನರಿಂಗಾನ: ನರಿಂಗಾನ ಗ್ರಾಮದ ಕಲ್ಲರಕೋಡಿಯ ದ.ಕ.ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮವು ಭಾನುವಾರ ನಡೆಯಿತು.
ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೆತ್ತಿಲ ಪದವುನಿಂದ ಮುರತಗುಂಡಿಯವರೆಗಿನ ರಸ್ತೆ ಬದಿಯಲ್ಲಿದ್ದ ಗಿಡಗಂಟಿಗಳನ್ನು ಸ್ವಚ್ಚಗೊಳಿಸಲಾಯಿತು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್, ಗೌರವಾಧ್ಯಕ್ಷ ಸಿದ್ದೀಕ್ ಪಾರೆ, ಉಪಾಧ್ಯಕ್ಷ ವಿವೇಕಾನಂದ ರೈ, ಗೌರವ ಸಲಹೆಗಾರ ಪ್ರೇಮಾನಂದ ರೈ, ನರಿಂಗಾನ ಪಂಚಾಯಿತಿ ಅಧ್ಯಕ್ಷರಾದ ಇಸ್ಮಾಯಿಲ್ ಮೀನಂಕೋಡಿ, ಉಪಾಧ್ಯಕ್ಷೆ ನಳಿನಾಕ್ಷಿ ಶೆಟ್ಟಿ, ಸದಸ್ಯರಾದ ಅಬ್ದುಲ್ ಖಾದರ್, ಸುಜಾತ, ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.


