UN NETWORKS
ಅಂಬ್ಲಮೊಗರು: ಬೈಕ್ ಮೂಲಕ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೊಲೀಸರು ಮಂಗಳವಾರ ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬಂಧಿಸಿದ್ದಾರೆ.
ಕುದ್ರೋಳಿಯ ಮಹಮ್ಮದ್ ಆಸೀಫ್ ಹಾಗೂ ಕುತ್ತಾರಿನ ಶೇಖ್ ಶಹಬಾಝ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಅಂಬ್ಲಮೊಗರು ಗ್ರಾಮದ ಮದಕ ಎಂಬಲ್ಲಿ ಬೈಕ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಕೈಗೆ ಸಿಕ್ಕಿ ಬಿದ್ದಿದ್ದಾರೆ. ಪೊಲೀಸರು ಇವರ ಬಳಿ ಇದ್ದ ಐದು ಪ್ಯಾಕೆಟ್ ಗಾಂಜಾ ಹಾಗೂ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಇವರಿಬ್ಬರೂ ಗಾಂಜಾ ಸೇವನೆ ಮಾಡಿದ ಬಗ್ಗೆ ಪೊಲೀಸ್ ತನಿಖೆಯಿಂದ ದೃಡಪಟ್ಟಿದೆ. ಆರೋಪಿಗಳು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಮಾರಾಟ ಮಾಡುತ್ತಿದ್ದರೆಂದು ಒಪ್ಪಿಕೊಂಡಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.