Site icon Ullalavani

ಕಾರ್ಯಗಾರಗಳು ಕೌಶಲ್ಯಾಭಿವೃದ್ಧಿಗೆ ಪೂರಕ : ಡಾ.ಎಂ.ಎಸ್ ಮೂಡಿತ್ತಾಯ

UN NETWORKS

ಉಳ್ಳಾಲ: ನಿರಂತರ ಶಿಕ್ಷಣ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿದ್ದು, ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ವಿಜ್ಞಾನಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು.

ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಎ.ಬಿ. ಶೆಟ್ಟಿ ಸ್ಮಾರಕ ದಂತವಿಜ್ಞಾನ ಮಹಾವಿದ್ಯಾಲಯದ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಂಶತಿ ಭವನದಲ್ಲಿ `ಕರೆಂಟ್ ಅಪ್‍ಡೇಟ್ಸ್ ಆನ್ ಫಂಡಮೆಂಟಲ್ಸ್ ಆಫ್ ಎಂಡೋಡಾಂಟಿಕ್ಸ್’ ವಿಚಾರದ ಮೇಲೆ ನಡೆದ ನಿರಂತರ ದಂತ ವೈದ್ಯಕೀಯ ಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಎ.ಬಿ. ಶೆಟ್ಟಿ ಸ್ಮಾರಕ ದಂತವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಕೃಷ್ಣ ನಾಯಕ್, ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕ ಡಾ| ರಾಜೇಂದ್ರ ಪ್ರಸಾದ್, ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್‍ನ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕಿ ಡಾ| ಶಶಿ ರಶ್ಮಿ ಆಚಾರ್ಯ, ಜೈಪುರದ ಮಹಾತ್ಮಗಾಂಧಿ ದಂತ ವಿಜ್ಞಾನ ಕಾಲೇಜಿನ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಡಾ|ಅಮಿತ್ ಪಟೋಡಿಯಾ, ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ – ಮಣಿಪಾಲ್, ಯೇನೆಪೊಯ ಡೆಂಟಲ್ ಕಾಲೇಜ್ ಮತ್ತು ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಕಾಲೇಜಿನ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 60ಕ್ಕೂ ಹೆಚ್ಚು ಜನ ಪ್ರತಿನಿ„ಗಳು ಭಾಗವಹಿಸಿದ್ದರು.

ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಮತ್ತು ಎಂಡೋಡಾಂಟಿಕ್ಸ್ ವಿಭಾಗ ಮುಖ್ಯಸ್ಥೆ ಹಾಗೂ ಕಾಲೇಜಿನ ಉಪಪ್ರಾಂಶುಪಾಲೆ ಡಾ| ಮಿತ್ರ ಎನ್. ಹೆಗ್ಡೆ ಸ್ವಾಗತಿಸಿದರು. ಡಾ| ಗೌರಿಶ್ ಭಟ್ ವಂದಿಸಿದರು.

Exit mobile version