UN NETWORKS
ತಲಪಾಡಿ: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆಯಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯೊಂದಿಗೆ ಅಧಿಕಾರ ನಡೆಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಅವರು ತಲಪಾಡಿ ಸಮೀಪದ ಕೆ.ಸಿ.ರೊಡ್ ಜಂಕ್ಷನ್‍ನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧ್ವಜ ನೀಡುವ ಮೂಲಕ ಚಾಲನೆ ನೀಡಿದರು.
ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಯ ಕಲ್ಪನೆಯಂತೆ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವೈಫಲ್ಯವನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಕಾಂಗ್ರೆಸ್‍ನ ಕಾರ್ಯಕರ್ತರು ನಡೆಸಲಿದ್ದು, ರಾಜ್ಯದ ಜನಪರ ಯೋಜನೆಗಳಿಂದ ಕಾಂಗ್ರೆಸ್‍ಗೆ ಜನರು ಬೆಂಬಲ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಸುರೇಖಾ ಚಂದ್ರಹಾಸ್, ಸಿದ್ಧಿಕ್ ತಲಪಾಡಿ, ಮಾಜಿ ಸದಸ್ಯ ಮಹಮ್ಮದ್ ಮುಸ್ತಾಫ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರ. ಕಾರ್ಯದರ್ಶಿ ರಹೆಮಾನ್ ಕೋಡಿಜಾಲ್, ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ಧಿಖ್ ತಲಪಾಡಿ, ವೈಭವ್ ಶೆಟ್ಟಿ, ವಿನಯಕುಮಾರ್ ಶೆಟ್ಟಿ, ಗಣೇಶ್ ಶೆಟ್ಟಿ ರಕ್ಷಾ ತಲಪಾಡಿ, ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ಝೈಬುನ್ನೀಸಾ, ಅಶ್ರಫ್, ಹಸೈನಾರ್, ಇಬ್ರಾಹಿಂ, ಜಯಂತಿ ಪಕ್ಕಳ, ವಲಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಯಾಕೂಬ್ ಪಿಲಿಕೂರು, ಉಪಾಧ್ಯಕ್ಷ ಮೋಹಿತ್ ಕುಮಾರ್, ತಲಪಾಡಿ ವಲಯ ಅಲ್ಪಸಂಖ್ಯಾತ ಅಧ್ಯಕ್ಷ ಅಬ್ದುಲ್‍ಸಲಾಂ, ಮಂಗಳೂರು ಕ್ಷೇತ್ರ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಮುತ್ತಾಲಿಬ್ ಪಂಜಾಳ, ಮುಖಂಡರಾದ ದೀಪಕ್ ಪಿಲಾರ್, ಪಿಯೂಷ್ ಡಿ.ಸೋಜಾ, ಅರುಣ್ ಕಾಪಿಕಾಡ್, ವಿನೋದ್ ಕುಂಪಲ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತ್ತಾರ್ ತಲಪಾಡಿ ಮತ್ತಿತರರು ಉಪಸ್ಥಿತರಿದ್ದರು.