Site icon Ullalavani

ವಿದ್ಯಾಸಂಸ್ಥೆಗಳಲ್ಲಿ ಕಲೆ ಸಂಸ್ಕೃತಿಯನ್ನು ಬೆಳೆಸುವ ಕೆಲಸ ನಿರಂತರವಾಗಿ ನಡೆಯಲಿ: ಪ್ರೊ.ಕೆ.ಭೈರಪ್ಪ

UN NETWORKS

ಮುಡಿಪು: ವಿದ್ಯಾಸಂಸ್ಥೆಗಳಲ್ಲಿ ಕಲೆ ಸಂಸ್ಕೃತಿಯನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆದರೆ ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುತ್ತಿರಬೇಕು ಮತ್ತು ಎಲ್ಲರ ಪ್ರೋತ್ಸಾಹವೂ ಅಗತ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ,ಬೈರಪ್ಪ ಅವರು ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಮುಡಿಪುವಿನಲ್ಲಿ ನಡೆಯುತ್ತಿರುವ ಸೂರಜ್ ಕಲಾಸಿರಿ-2017 ಸಾಂಸ್ಕೃತಿಕ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸಾಧನಶ್ರೀ ಪ್ರಶಸ್ತಿ ಪ್ರಧಾನಗೈದು ಮಾತನಾಡಿದರು.

ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮವನ್ನು ಸೂರಜ್ ಶಿಕ್ಷಣ ಸಂಸ್ಥೆಯು ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಜ್ರಂಭಣೆಯಿಂದ ನಡೆಯುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕರುಣಾಕರಣ್, ಹೇಮಂತ್ ಕುಮಾರ್, ಇಲಿಯಾಸ್ ಸ್ಯಾಂಟೀಸ್, ನವೀನ್ ಕಿಲ್ಲೆ, ದೇವದಾಸ್ ರೈ, ಪ್ರಕಾಶ್ ಶೆಟ್ಟಿ, ಶ್ರೀಪತಿ ಭಟ್ ಮೂಡಬಿದ್ರೆ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರಿನ ಕೌನ್ಸಿಲರ್ ಬಿ.ರೇವತಿ ಸನಿಲ್, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಸೂರಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ್ ರೇವಣ್ಕರ್, ಸಮಿತಿ ಉಪಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಪ್ರಚಾರ ಸಮಿತಿ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ, ಹೇಮಲತಾ ರೇವಣ್ಕರ್, ಗೀತಾ ಕೆ.ಉಚ್ಚಿಲ್ ಮೊದಲಾದವರು ಉಪಸ್ಥಿತರಿದ್ದರು.

ಸೂರಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಂಜುನಾಥ ರೇವಣ್ಕರ್ ಅವರು ಸ್ವಾಗತಿಸಿದರು. ಬಾಸ್ಕರ್ ರೈ ಕುಕ್ಕುವಳ್ಳಿ ವಂದಿಸಿದರು. ಸೋಂದಾ ಲಕ್ಷೀಷ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

 

Exit mobile version