UN NETWORKS
ಕಲ್ಲಡ್ಕ : ಕಲ್ಲಡ್ಕದಲ್ಲಿ ಮಂಗಳವಾರ ರಾತ್ರಿ ಕೊಲೆ ಆರೋಪಿಯೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಇಂದು ಬಂಧಿಸಿದ್ದಾರೆ.ಕಲ್ಲಡ್ಕದ ನಿವಾಸಿ ಖಲೀಲ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಚೂರಿ ಇರಿತ ಘಟನೆಯಿಂದ ಸ್ಥಳದಲ್ಲಿ ಆತಂಕದ ಸ್ಥಿತಿ ಉಂಟಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮುಂಜಾಗ್ರತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ಕರೆಸಿ, ಕಲ್ಲಡ್ಕ, ವಿಟ್ಲದಾದ್ಯಂತ ಬಿಗು ಬಂದೋಬಸ್ತು ಏರ್ಪಡಿಸಲಾಗಿತ್ತು. ಇದೀಗ ಕಲ್ಲಡ್ಕ ಪೊಲೀಸರ ನಿಯಂತ್ರಣದಲ್ಲಿದ್ದು, ಶಾಂತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
