UN NETWORKS
ಕಣ್ಣೂರು : ಸಿಪಿಎಂ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಇದು ಆರೆಸ್ಸೆಸ್ ಕಾರ್ಯಕರ್ತರ ಕೃತ್ಯ ಎಂದು ಸಿಪಿಎಂ ಆರೋಪಿಸಿದೆ.
ದಾಳಿಯಿಂದ ಸಿಪಿಎಂ ಕಾರ್ಯಕರ್ತ ಚಂದ್ರನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಕೇರಳದ ತಿರುವನಂತಪುರಂನಲ್ಲೂ ಅಪರಿಚಿತ ವ್ಯಕ್ತಿಗಳು ಸಿಪಿಎಂ ಕಾರ್ಯಕರ್ತನ ಮೇಲೆ ದಾಳಿ ನಡೆಸಿದ್ದರು. ಅವರನ್ನು ಕಣ್ಣೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಗಳ ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರಿದ್ದಾರೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಆರೋಪಿಸಿದ್ದಾರೆ.


