UN NETWORKS
ಮುಡಿಪು: ಕೊಣಾಜೆ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನಾರ್ಯ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವರ್ಕಾಡಿ ಗ್ರಾಮದ ತಲೆಕ್ಕಿ ಗ್ರಾಮದ ಮಹಮ್ಮದ್ ಬಶೀರ್(21) ಎಂದು ಗುರುತಿಸಲಾಗಿದೆ. ಈತನಿಂದ ಪೊಲೀಸರು 1 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ನಾರ್ಯ ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ಈತನ ಜೊತೆಗೆ ಇರುವ ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


