UN NETWORKS
ಉಳ್ಳಾಲ: ನಮ್ಮ ತುಳುನಾಡಿನ ಕೃಷಿ ಸಂಸ್ಕೃತಿಯೊಂದಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರತ್ನೋತ್ಸವದಂತಹ ಕಾರ್ಯಕ್ರಮ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಕಾರ್ಯಕ್ರಮ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಭಿಪ್ರಾಯಪಟ್ಟರು.
ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆಯುತ್ತಿರುವ 6ನೇ ವರ್ಷದ ನಾಡುನುಡಿ ವೈಭವದ ರತ್ನೋತ್ಸವ-2017 ಕರಾವಳಿ ಕರ್ನಾಟಕದ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಬೆರಳೆಣಿಕೆಯಷ್ಟು ಶಿಕ್ಷಣ ಪಡೆಯುತ್ತಿದ್ದರು. ಸರ್ವ ಶಿಕ್ಷಣ ಆಭಿಯಾನ, ಶಿಕ್ಷಣ ಮಾಹಿತಿ ಹಕ್ಕು ಬಂದ ನಂತರ ಪ್ರತಿಯೊಬ್ಬರು ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಶೋಷಣೆಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಶಿಕ್ಷಣವಂತರಾಗಬೇಕು. ಈ ಸಂದರ್ಭದಲ್ಲಿ ಸ್ವಸ್ಥ ಸಮಾಜ, ಆರೋಗ್ಯ ಸಮಾಜ ನಿರ್ಮಾಣವಾದಾಗ ನಾವು ಅಭಿವೃದ್ದಿಯಾಗುವುದರೊಂದಿಗೆ ಸಮಾಜ ಅಬಿವೃದ್ಧಿಯಾಗುತ್ತದೆ ಎಂದರು.
ತುಳು ಭಾಷೆಯ ಸುವರ್ಣ ಯುಗ ಪ್ರಾರಂಭಗೊಂಡಿದ್ದು ಎಲ್ಲಾ ಕಡೆ ತುಳುವಿಗೆ ಸಂಬಂಧಿ ಸಿದ ಕಾರ್ಯಕ್ರಮಗಳು ನಡೆಯುತ್ತಿದೆ.ಪಂಚದ್ರಾವಿಡ ಭಾಷೆಯಲ್ಲಿ ತುಳು ಭಾಷೆ ಒಂದಾಗಿದ್ದು ನಮ್ಮವರ ಅಸಡ್ಡೆಗಳಿಂದ ಗಳಿಂದ ತುಳು ಭಾಷೆ ಹಿಂದೆ ಬಿದ್ದಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಂತಹ ಶಿಕ್ಷಣ ಸಂಸ್ಥೆಗಳು ಇಂತಹ ಸಂಸ್ಕಾರ ನೀಡುವ ಕಾರ್ಯ ಮಾಡುವ ಮೂಲಕ ಮುಂದಿನ ಜನಾಂಗಕ್ಕೆ ನಮ್ಮ ಸಂಸ್ಕೃತಿಯನ್ನು ಮುಟ್ಟಿಸುವ ಕಾರ್ಯ ಸಾದ್ಯ ಎಂದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಮಲಾರ್ ಜಯರಾಮ್ ರೈ ವಹಿಸಿದ್ದರು.
ಕೋಟೆಕಾರು ಶ್ರೀ ಶಂಕರ ಮಠದ ಧರ್ಮಾಧಿಕಾರಿ ಸತ್ಯಶಂಕರ ಬೊಳ್ಳಾವ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ. ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಮುಸ್ತಫಾ ಮಲಾರ್, ಸುರತ್ಕಲ್‍ನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜೇಂದ್ರ ಕಲ್ಬಾವಿ, ಕೊರಗಪ್ಪ ಶೆಟ್ಟಿ ಹರೇಕಳ, ರತ್ನಾವತಿ ಕೊರಗಪ್ಪ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಹರೇಕಳ, ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಶಾಲಾ ಮುಖ್ಯ ಶಿಕ್ಷಕಿ ನಯೀಮ್ ಹಮೀದ್ ಹಾಗೂ ವಿದ್ಯಾರ್ಥಿ ನಾಯಕ ಶ್ರೇಯಸ್ ಉಪಸ್ಥಿತರಿದ್ದರು.
ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು ಮೆರವಣಿಗೆಗೆ ಚಾಲನೆ ನೀಡಿದರು. ದೇರಳಕಟ್ಟೆ ರತ್ನ ಎಜ್ಯಕೇಶನ್ ಟ್ರಸ್ಟ್ ಕೋಶಾಧಿಕಾರಿ ರತ್ನಾವತಿ ಕೆ. ಶೆಟ್ಟಿ ಧ್ವಜಾರೋಹಣ ಗೈದರು.
ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ವಿದ್ಯಾರತ್ನ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್. ಶೆಟ್ಟಿ ವಂದಿಸಿದರು. ಶಿಕ್ಷಕರಾದ ರವೀಶ್ ಮತ್ತು ನವೀನ್ ಕಾರ್ಯಕ್ರಮ ನಿರ್ವಹಿಸಿದರು.