UN NETWORKS
ಉಳ್ಳಾಲ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಮುಖಂಡ ಖಲೀಲ್ ಎಂಬವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮತ್ತು ಜಿಲ್ಲೆಯಾದ್ಯಂತ ಶಾಂತಿ ನೆಲೆಸುವ ಸಲುವಾಗಿ ಜಿಲ್ಲಾಧಿಕಾರಿ ಪಿಎಫ್ ಐ ಮುಖಂಡ ಸೇರಿದಂತೆ ಹಿಂದು ಜಾಗರಣಾ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಇಬ್ಬರನ್ನು ಆರು ತಿಂಗಳುಗಳ ಕಾಲ ಗಡಿಪಾರು ನಡೆಸಿದ್ದಾರೆಂದು ತಿಳಿದುಬಂದಿದೆ.
ಇಬ್ಬರಿಗೆ ಗಡಿಪಾರಿಗೆ ಆದೇಶ ನೀಡುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂತಿಲ್ ಇಬ್ಬರ ಗಡಿಪಾರಿಗೆ ಆದೇಶ ನೀಡಿದ್ದು, ಇಬ್ಬರು ಜಿಲ್ಲೆಯಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.


