UN NETWORKS
ಬಂಟ್ವಾಳ : ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಳೆಯ ಟೋಲ್ ಗೇಟ್ ಬಳಿ ನೆಹರೂನಗರ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಕೆ.ಎಸ್.ಆರ್.ಟಿ.ಸಿ. ಬಸ್ ಢಿಕ್ಕಿಯಾಗಿದ್ದು, ಅಪಘಾತ ಸಂಭವಿಸಿದೆ ಎಂದು ಬಂಟ್ವಾಳ ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೊಳಗಾದ ಮ್ಯಾಸ್ಟ್ರೋ ಭಾಗಶಃ ನುಜ್ಜು-ಗುಜ್ಜಾಗಿದ್ದು, ಇಬ್ಬರು ಕೂಡ ಡಾಮಾರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಸ್ವರೂಪದಲ್ಲಿ ಗಾಯಗೊಂಡರು.
ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ
ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕ ಹಾಗೂ ನಿರ್ವಹಕರ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುತ್ತಿದೆ.
ಸಾವಿನಲ್ಲೂ ಜತೆಯಾದ ಮಿತ್ರರು!
ಪಾಣೆಮಂಗಳೂರು, ನೆಹರೂ ನಗರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ಮೃತ ಪಟ್ಟ ಇಬ್ಬರು ಕೂಡ ಆತ್ಮೀಯ ಸ್ನೇಹಿತರು. ಬಾಲ್ಯದಿಂದಲೂ ಜತೆಯಾಗಿದ್ದ ಹರ್ಷದ್ ಮತ್ತು ಅಝಾದ್ ಸಾವಿನ ಪಯಣದಲ್ಲೂ ಜತೆಗೂಡಿದ್ದು, ವಿಧಿಯಾಟವಾಗಿದೆ.
