Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ನರಿಂಗಾನ

ನರಿಂಗಾನ: ಸೌರ್ಕುಡೇಲು ಕಿರು ಸೇತುವೆಗೆ ಶಿಲಾನ್ಯಾಸ

UllalaVaniBy UllalaVaniMarch 2, 2015Updated:March 2, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

1ullal BRIDGE

ಉಳ್ಳಾಲ: ಯಾವುದೇ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಆ ಭಾಗದ ಜನತೆ ಹಾಗೂ ಜವಾಬ್ದಾರಿಯುತ ಸಂಘ ಸಂಸ್ಥೆಗಳು ಸಂಘಟನೆಗಳ ಪಾತ್ರ ಬಹು ಮುಖ್ಯ. ಆ ನಿಟ್ಟಿನಲ್ಲಿ ನರಿಂಗಾನ ಗ್ರಾಮದ ಸೌರ್ಕುಡೇಲಿನಲ್ಲಿ ನೂತನ ಕಿರು ಸೇತುವೆ ನಿರ್ಮಾಣಕ್ಕಾಗಿ ಸಂಘ ಸಂಸ್ಥೆಗಳು ಹಾಗೂ ಇಲ್ಲಿನ ಜನರು ವಿವಿಧ ರೀತಿಯಲ್ಲಿ ಶ್ರಮಿಸಿದ್ದಾರೆ. ನೂತನ ಸೇತುವೆ ನಿರ್ಮಾಣದ ಮೂಲಕ ಅವರೆಲ್ಲರ ನಿರೀಕ್ಷೆ ಶೀಘ್ರದಲ್ಲಿ ಈಡೇರಲಿದ್ದು, ಈ ಯೋಜನೆಗೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ರಾಜ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಭಿಪ್ರಾಯಪಟ್ಟರು.
ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‍ನಿಂದ ತೌಡುಗೋಳಿ ಸಂಪರ್ಕ ರಸ್ತೆಯ ಸರ್ಕುಡೇಲಿನಲ್ಲಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಿರು ಸೇತುವೆಗೆ ಭಾನುವಾರ ಶಿಲಾನ್ಯಾಸಗೈದು ಅವರು ಮಾತನಾಡಿದರು.
ನರಿಂಗಾನ ಭಾಗದ ಅತಿಮುಖ್ಯ ಸೇತುವೆ ಸರ್ಕುಡೇಲು ಸೇತುವೆ ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ಪ್ರಮುಖ ಕೊಂಡಿಯೇ ಆಗಿದೆ. ಸೇತುವೆ ನಿರ್ಮಾಣ ಕಾಲದಲ್ಲಿ ಇಲ್ಲಿನ ಭೂಮಾಲೀಕರು ಪರೋಪಕಾರಿ ಭಾವನೆ ತೋರಿದ ಹಿನ್ನೆಲೆಯಲ್ಲಿ ಸುಮಾರು ಐದು ದಶಕಗಳ ಹಿಂದೆಯೇ ಈ ವ್ಯಾಪ್ತಿಯಲ್ಲಿ ಮೊತ್ತಮೊದಲ ಸದೃಢ ಸೇತುವೆ ನಿರ್ಮಾಣವಾಗಲು ಸಾಧ್ಯವಾಗಿತ್ತು. ಕಾಲಕ್ರಮೇಣ ಸೇತುವೆ ಶಿಥಿಲಗೊಂಡಿದ್ದು ನೂತನ ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದ್ದು ಕಾಮಗಾರಿ ಸಂದರ್ಭ ಸ್ಥಳೀಯರ ಸಹಕಾರ ಅತ್ಯಗತ್ಯ ಎಂದು ನುಡಿದರು.
ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಸಾಲಿನಲ್ಲಿ ಬಹಳಷ್ಟು ಕಾಮಗಾರಿಗಳನ್ನು ನಡೆಸಲಾಗಿದ್ದು ಮುಖ್ಯವಾಗಿ ಜನರಿಗೆ ಮೂಲ ಸೌಲಭ್ಯ ಒದಗಿಸುವತ್ತ ಆದ್ಯತೆ ನೀಡಲಾಗುತ್ತಿದೆ. ಅದರಂತೆ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆಯನ್ನು ಎಲ್ಲ ಭಾಗದಲ್ಲಿ ಅಳವಡಿಸುವ ಪ್ರಯತ್ನ ನಡೆದಿದೆ. ಕೆಲವು ಭಾಗದಲ್ಲಿ ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ವಿಳಂಬವಾಗಿದ್ದರೂ ಕಾಮಗಾರಿ ಪೂರ್ಣಗೊಳಿಸಿದ ತೃಪ್ತಿ ಇದೆ ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷೆ ಜಯಂತಿ ಎಸ್. ಉಪಾಧ್ಯಕ್ಷ ಶೇಖಬ್ಬ ನಿಡ್ಮಾಡ್, ಪಂಚಾಯಿತಿ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ, ಇಸ್ಮಾಯಿಲ್ ಮೀನಂಕೋಡಿ, ಅಬ್ದುಲ್ಲ ಕೊಡಂಚಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ಮೋರ್ಲಗುತ್ತು, ಮುಡಿಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೊಂಟುಗೋಳಿ, ಡಾ. ಉದಯಶಂಕರ್ ಭಟ್ ಸೌರ್ಕುಡೇಲು, ನರಿಂಗಾನ ಯುವಕ ಮಂಡಲದ ಅಧ್ಯಕ್ಷ ನವೀನ್ ಶೆಟ್ಟಿ ಮಂಗಲ್ಪಾಡಿ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಎಲ್ ಸರ್ಕುಡೇಲು, ಸ್ಥಳೀಯರಾದ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು, ಮುರಳೀಧರ ಶೆಟ್ಟಿ ಮೋರ್ಲ, ಚಂದ್ರಹಾಸ್ ಪೂಜಾರಿ ಸರ್ಕುಡೇಲು, ಲಿಂಗಪ್ಪ ಪೂಜಾರಿ ಸರ್ಕುಡೇಲು ಹಾಗೂ ಪುರಂದರ ಸರ್ಕುಡೇಲು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷದ ಯುವತಿ ನಾಪತ್ತೆ- ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ…!!

May 5, 2026

ಕಂಬಳ ನಮ್ಮ ದೇಶದ ಆಸ್ತಿ, ಸಂಸ್ಕೃತಿಯ ಪ್ರತೀಕ: ಡಿ.ಕೆ.ಶಿವಕುಮಾರ್

January 12, 2026

ಈ ಬಾರಿಯ ನರಿಂಗಾನ ಕಂಬಳದ ವಿಶೇಷತೆಗಳೇನು..??

January 6, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಶೃಂಗೇರಿ ಶಾಸಕರ ‘ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಯಾವುದೇ ವಿಳಂಬ ಮಾಡಿಲ್ಲ’ – ಸ್ಪೀಕರ್ ಯು.ಟಿ. ಖಾದರ್

By UllalaVaniMay 6, 20260

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ…

ಮೇ 10- ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಇದರ ವತಿಯಿಂದ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

May 6, 2026

ಹಿರಾ ಮಹಿಳಾ ಕಾಲೇಜು ವತಿಯಿಂದ ರಕ್ತದಾನ ಶಿಬಿರ

May 6, 2026

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

May 6, 2026
1 2 3 … 1,899 Next
Automatic YouTube Gallery

|| ULLALA TALUK HIGHLIGHTS || 06.05.2026

|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 06.05.2026
Now Playing
|| ULLALA TALUK HIGHLIGHTS || 06.05.2026
|| ULLALA TALUK HIGHLIGHTS || 06.05.2026 📍 Ullal | Dakshina Kannada | ...
|| ULLALA TALUK HIGHLIGHTS || 06.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
Now Playing
ಮೇ.7ರಿಂದ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ...
ಬಾಳೆಪುಣಿ ಶ್ರೀ ಆದಿಬ್ರಹ್ಮ ಮೊಗೇರರು ಮತ್ತು ಪರಿವಾರ ದೈವಗಳ ಕ್ಷೇತ್ರ;ಮೇ.7ರಿಂದ ಮೇ.10ರವರೆಗೆ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮ

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾಹಿತಿ


📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version