UN NETWORKS
ಉಳ್ಳಾಲ: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯ ಅನಾವರಣದೊಂದಿಗೆ ಅವರಲ್ಲಿ ಸಾಮಾಜಿಕ, ಮಾನವೀಯ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಮೌಲ್ಯಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ ಎಂದು ಶಾರದಾ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಅಭಿಪ್ರಾಯಪಟ್ಟರು.
ಅವರು ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕ್ಯಾಂಪಸ್ನ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ `ಸ್ಪಿರಿಟ್’ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಕೌನ್ಸಿಲರ್ ಮಮತಾ ಭಂಡಾರಿ ಮಾತನಾಡಿ ಶಾರಾದ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅವರ ಕಾರ್ಯ ಶೈಲಿಯಿಂದ ಒಂದೊಂದು ವಿಶೇಷತಾ ಗುಣವನ್ನು ಹೊಂದಿರುವುದು ಕಾಣುತ್ತದೆ. ಇಲ್ಲಿ ಮಕ್ಕಳಿಗೆ ಸಂಸ್ಕಾರದೊಂದಿಗೆ ಮೌಲ್ಯಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.

ವಿದ್ಯಾರ್ಥಿನಿ ಶೈಲಾಶ್ರೀ ಐತಾಳ್ ಸ್ವಾಗತಿಸಿದರು. ದೃಶ್ಯ ಭಂಡಾರಿ ವಂದಿಸಿದರು. ಝಾಹಿದ್ ಮಹಮ್ಮದ್, ಅಂಕಿತಾ ಹೆಗ್ಡೆ ಸಾತ್ವಿಕ ಹರೀಶ್ ಕುಮಾರ್, ಅನಂತ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು. ಶಾರದಾ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲೆ ಸುಷ್ಮಾ ದಿನಕರ್, ಪ್ರಬಾರ ಪ್ರಾಂಶುಪಾಲೆ ಲತಾಂಜಲಿ ರೈ, ಉಪಪ್ರಾಂಶುಪಾಲ ಮೋಹನ್ದಾಸ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನಾಯಕ ಬಿ.ಜಿ., ಆಡಳಿತಾಧಿಕಾರಿ ವಿವೇಕ್ ತಂತ್ರಿ ಉಪಸ್ಥಿತರಿದ್ದರು.


