Site icon Ullalavani

ಐರಾವತ ಬಸ್ ಭೀಕರ ಅಪಘಾತ: 8 ಮಂದಿ ದುರ್ಮರಣ

UN NETWORKS

ಹಾಸನ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಇಂದು ಮುಂಜಾನೆ ಹಾಸನ ತಾಲೂಕಿನ ಶಾಂತಿಗ್ರಾಮದ ಸಮೀಪ ಭೀಕರ ಅಪಘಾತಕ್ಕೀಡಾಗಿ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಐರಾವತ ಬಸ್ ಇದಾಗಿದ್ದು, ಅಪಘಾತದಲ್ಲಿ ಬಸ್ ಚಾಲಕ ಲಕ್ಷ್ಮಣ್ ಮತ್ತು ಕಂಡಕ್ಟರ್ ಶಿವಪ್ಪ ಛಲವಾದಿ, ವಿದ್ಯಾರ್ಥಿನಿ ಡಯಾನ, ಗಂಗಾಧರ್ ಸಹಿತ ಒಟ್ಟು ಎಂಟು ಮಂದಿ ಮೃತಪಟ್ಟಿದ್ದು, 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.

ಪೊಲೀಸ್ ವರಿಷ್ಠರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Exit mobile version