Site icon Ullalavani

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

UN NETWORKS

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕಾಶಿನಾಥ್ ಇನ್ನಿಲ್ಲ.

ಕಳೆದ ಎರಡು ದಿನಗಳಿಂದ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಶಿನಾಥ್ ಇಂದು ಕೊನೆಯುಸಿರೆಳೆದಿದ್ದಾರೆ. ಈಚೆಗೆ ಇವರು ಚೌಕ ಸಿನಿಮಾದಲ್ಲಿ ಅಭಿನಯಿಸಿದ್ದರು. ಕಾಶಿನಾಥ್ ಅವರು `ಅಪರೂಪದ ಅತಿಥಿಗಳು’ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದ್ದರು.

ಇವರು ಉಪೇಂದ್ರ, ವಿ. ಮನೋಹರ್, ಸುನಿಲ್ ಕುಮಾರ್ ದೇಸಾಯಿ ಸೇರಿದಂತೆ ಹಲವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಇವರು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ್ದರು. ಇವರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Exit mobile version