UN NETWORKS
ಉಳ್ಳಾಲ: ಹಿರಾ ಮಹಿಳಾ ಕಾಲೇಜು, ಬಬ್ಬುಕಟ್ಟೆ ಮತ್ತು ಮಂಗಳೂರು ನಗರ ಪೊಲೀಸ್ ಇಕೊನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಜ. ಶರೀಫ್ ಇನ್ಸ್‍ಪೆಕ್ಟರ್, ಇಕೊನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸ್ ಇವರು ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಂತಿ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಜ. ಅಬ್ದುರ್ ರಹಮಾನ್, ಕಾಲೇಜಿನ ಪ್ರಾಂಶುಪಾಲ ಭಾರತಿ ಎಂ.ಅರ್. ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಕು. ಆಯಿಶತ್ ಫರಾಶ ಮತ್ತು ಆಯಿಶತ್ತುಲ್ ನಾದಿಯ ಕಿರಾತ್ ಪಠಿಸಿದರು. ಕು. ಮರಿಯಂ ನೂಹ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.


