ಉಳ್ಳಾಲ : ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ಪೂರ್ವಭಾವಿಯಾಗಿ ಉಳ್ಳಾಲ ನಗರ ಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಎಲ್ಲಾ ಕಾಮಗಾರಿಗಳು ಮುಗಿಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು.
ಅವರು ಉಳ್ಳಾಲ ಉರೂಸ್ ಪೂರ್ವ ಭಾವಿಯಾಗಿ ಉಳ್ಳಾಲ ನಗರಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಿ ಉರೂಸ್ ಕಾರ್ಯಕ್ರಮದ ಸಂದರ್ಭದಲ್ಲಿ ದೇಶ ವಿದೇಶದಿಂದ ಬರುವ ಯಾತ್ರಾರ್ಥಿಗಳಿಗೆ ಯಾವುದೇ ಅಡೆ ತಡೆಯಾಗದ ರೀತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.
ಸಭೆಯಲ್ಲಿ ಉಳ್ಳಾಲ ಪುರಸಭಾ ಅಧ್ಯಕ್ಷೆ ಗಿರಿಜಾ ಬಾೈ, ಉಪಾಧ್ಯಕ್ಷೆ ರಝೀಯಾ ಇಬ್ರಾಹಿಂ, ಸ್ಥಾಯಿ ಸಮಿತಿ ಅಧ್ಯಕ್ಷ ಮಹಮ್ಮದ್ ಮುಕ್ಕಚ್ಚೇರಿ, ಉಳ್ಳಾಲ ನಗರಸಭಾ ಮುಖ್ಯಾ„ಕಾರಿ ರೂಪಾ ಟಿ. ಶೆಟ್ಟಿ , ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.