UN NETWORKS
ಇರಾ: ಕರ್ನಾಟಕ ಸರಕಾರ, ದ.ಕ.ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಇರಾ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ನವೀಕೃತ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭವು ಜನವರಿ 26ರಂದು ಶುಕ್ರವಾರ ಸಂಜೆ 5ಕ್ಕೆ ಇರಾ ಕಂಚಿನಡ್ಕಪದವಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕ ಸಚಿವರಾದ ಯು.ಟಿ.ಖಾದರವರು ನೆರವೇರಿಸಲಿದ್ದಾರೆ.. ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಂದ್ರಾವತಿ, ಪಂಚಾಯತ್ ಸದಸ್ಯರಾದ ಸುಧಾಕರ್ ಕೆ.ಟಿ, ತುಳಸಿ ಪೂಜಾರಿ, ಶೇಖರ ಪೂಜಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಇನ್ನಿತರ ಅತಿಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತವನ್ನು ಬಯಸುವ
ಅಬ್ದುಲ್ ರಝಾಕ್ ಕುಕ್ಕಾಜೆ
(ಅಧ್ಯಕ್ಷರು, ಇರಾ ಗ್ರಾಮ ಪಂಚಾಯತ್)
…………..
ನಳಿನಿ ಎ.ಕೆ.
(ಪಂಚಾಯತ್ ಅಭಿವೃದ್ಧಿ ಅಧಿಕಾರಿ)
……………





