Site icon Ullalavani

ಲಾರಿ ಅಪಘಾತ:ಯುವಕ ಸಾವು

UN NETWORKS

ಉಳ್ಳಾಲ: ಮೀನು ಸಾಗಾಟದ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಂಬ್ಲಮೊಗರು ಎಲಿಯಾರು ನಿವಾಸಿ ಮುಹಮ್ಮದ್ ಶಾಕಿಬ್ (20) ಮೃತ ದುರ್ದೈವಿ.
ಶಾಕೀಬ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿ ಹೊಡೆದ. ಡಿಕ್ಕಿಯ ರಭಸಕ್ಕೆ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಅಲ್ಲೇ ಮೃತಪಟ್ಟಿದ್ದಾರೆ.

ಉಳ್ಳಾಲ ಪೊಲೀಸರು ಘಟನಾಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version