UN NETWORKS
ತಲಪಾಡಿ: ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ದೀಪ ಪೂಜೆ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಎರಡು ಸಾವಿರ ಮಹಿಳೆಯರು ಪಾಲ್ಗೊಂಡಿದ್ದರು. ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ದೀಪಪೂಜೆ ನೆರವೇರಿಸಿದರು.



ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠಾಧೀಶ ಧರ್ಮಪಾಲ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ , ಹಿಂದು ಜಾಗರಣಾ ವೇದಿಕೆ ಮುಖಂಡ ಜಗದೀಶ ಕಾರಂತ್, ವಿ.ಹಿಂ.ಪ ಮುಖಂಡ ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.


























