ಉಳ್ಳಾಲ: ಯಾರು ತನ್ನನ್ನು ತಾನು ಅರಿತನೋ ಅವನು ಸೃಷ್ಟಿಕರ್ತನನ್ನು ಅರಿತನು. ವಿದ್ಯಾರ್ಥಿಗಳು ಇಂದು ತಮ್ಮನ್ನು ಅರಿಯಬೇಕಾದ ಅಗತ್ಯವಿದೆ. ಅಂತಹ ಶಿಕ್ಷಣವನ್ನು ಈ ಸಂಸ್ಥೆ ನೀಡುತ್ತಿದೆ’ ಎಂದು ಹಿರಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ರಹಮತುಲ್ಲಾ ಅಭಿಪ್ರಾಯಪಟ್ಟರು.
ಅವರು ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನ ವಾರ್ಷಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆ.ಎಂ. ಶರೀಫ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪಿ.ಟಿ.ಎ. ಅಧ್ಯಕ್ಷರಾದ ಯು.ಕೆ.ಖಾಲಿದ್ರವರು ಸಂದರ್ಬೋಚಿತವಾಗಿ ಮಾತನಾಡಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಇತರ ಪಿ.ಟಿ.ಎ. ಸದಸ್ಯರು, ಹಿರಾ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಫಾತಿಮಾ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಭಾರತಿ ಎಮ್. ಆರ್ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿ ನಾಯಕಿ ಸಫ ಮೆಹರೂನ್ ಸ್ವಾಗತಿಸಿದರು.
ವಿದ್ಯಾರ್ಥಿನಿ ಸಮೀರ ಕಾರ್ಯಕ್ರಮ ನಿರೂಪಿಸಿದರು, ಸೌಧ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.


