Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತಲಪಾಡಿ ಗ್ರಾಮಸಭೆಯಲ್ಲಿ ಟೋಲ್ ಗೇಟ್ ವಿರುದ್ಧ ಆಕ್ರೋಶ

UllalaVaniBy UllalaVaniJanuary 31, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ತಲಪಾಡಿ: ತಲಪಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ತಲಪಾಡಿ ಗ್ರಾಮಸ್ಥರು, ಟೋಲ್ ಸಂಸ್ಥೆ ಅಧಿಕಾರಿಯನ್ನು ತರಾಟೆಗೆ ತೆಗೆದು ಸ್ಥಳೀಯ ವಾಹನಗಳಿಗೆ ಟೋಲ್ ಸುಂಕ ರಿಯಾಯಿತಿ ಇದೆ, ಈ ಬಗ್ಗೆ ಗುರುತು ಚೀಟಿ ತೋರಿಸಿದರೂ ಸಿಬ್ಬಂದಿ ನೂರೆಂಟ್ ದಾಖಲೆ ಕೇಳುವುದು, ವಿಚಿತ್ರ ರೀತಿಯಲ್ಲಿ ನೋಡುವುದು ನಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ಷೇಪಿಸಿದ ಘಟನೆ ತಲಪಾಡಿ ಗ್ರಾಮಸಭೆಯಲ್ಲಿ ನಡೆಯಿತು.

ಮಂಗಳವಾರ ತಲಪಾಡಿ ಶಾಲಾ ಮೈದಾನದಲ್ಲಿ ಜರಗಿದ 2018 ನೇ ಸಾಲಿನ ಎರಡನೇ ಸುತ್ತಿನ ತಲಪಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯರಿಗೆ ಟೋಲ್ ಸುಂಕದಲ್ಲಿ ರಿಯಾಯಿತಿ ನೀಡಬೇಕೆನ್ನುವು ನಿಯಮ ಹೆದ್ದಾರಿ ಪ್ರಾಧಿಕಾರ ಮಾಡಿಲ್ಲ, ಅಲ್ಲದೆ ನಿಮಗೆ ಉಚಿತವಾಗಿ ಬಿಡಬೇಕು ಎಂದೇನೂ ಇಲ್ಲ ಎಂದು ಶಿವಪ್ರಸಾದ್ ಹೇಳಿದ್ದು ಗ್ರಾಮಸ್ಥರನ್ನು ಕೆರಳಿಸಿತು. ನಮ್ಮ ಮನೆಗೇ ನಾವು ಸುಂಕ ಕಟ್ಟಬೇಕೇ, ನಾವೇನು ನಿಮ್ಮಲ್ಲಿ ಭಿಕ್ಷೆ ಬೇಡುತ್ತಿಲ್ಲ. ನಿಮ್ಮ ಔದಾರ್ಯವೂ ನಮಗೆ ಬೇಡ. ಸುರತ್ಕಲ್‍ನಲ್ಲಿ ಕೆ.ಎ-19 ಇರುವ ಎಲ್ಲಾ ವಾಹನಗಳಿಗೆ ಟೋಲ್ ಸುಂಕ ರಿಯಾಯಿತಿ ಇದೆ. ಇಲ್ಲೂ ಹಾಗೇ ಮಾಡಬಹುದಿತ್ತು. ಆದರೆ ಕೇರಳದವರಿಗಾಗಿ ಐದು ಕಿ.ಮೀ. ಅಂತರದವರಿಗೆ ರಿಯಾಯಿತಿ ಕೇಳಿದ್ದೇವೆ. 90ಶೇ. ಹೆದ್ದಾರಿ ಕಾಮಗಾರಿ ಮುಗಿದಿದೆ ಎನ್ನುವುದು ಸುಳ್ಳಲ್ಲವೇ ಎಂದು ಗ್ರಾಮಸ್ಥರು ಆಕ್ರೋಶದಿಂದಲೇ ಹೇಳಿದರು. ನಮಗೆ ಯಾರೂ ಔದಾರ್ಯ ತೋರಿಸಿಲ್ಲ, ನಮ್ಮ ಪ್ರಯತ್ನದಿಂದ ನಾವು ಉಚಿತವಾಗಿ ಹೋಗುತ್ತಿದ್ದೇವೆ ಎಂದು ಸುರೇಶ್ ಆಳ್ವ ಗ್ರಾಮಸ್ಥರ ವಾದವನ್ನು ಸಮರ್ಥಿಸಿದರು.

ಎಂಟು ವರ್ಷಗಳ ಹಿಂದಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ತಲಪಾಡಿಯ ಹೆಸರಿಲ್ಲ ಎಂದು ಗ್ರಾಮಸ್ಥರು ಇಂಜಿನಿಯರ್ ವಿರುದ್ಧ ಸೆಟೆದು ನಿಂತರು. ಈ ವಿಚಾರದಲ್ಲಿ ಪಂಚಾಯಿತಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಯೋಜನೆ ಗ್ರಾಮಕ್ಕೆ ಬರಲೇಬೇಕು ಎಂದು ಅಧ್ಯಕ್ಷರೂ ಧ್ವನಿಗೂಡಿಸಿದರು.

ಹಿಂದಿನ ಗ್ರಾಮಸಭೆಯ ನಿರ್ಣಯ ಓದುವ ಸಂದರ್ಭ ಬಹುಗ್ರಾಮ ಕುಡಿಯುವ ನೀರಿನ ವಿಚಾರ ಪ್ರಸ್ತಾಪವಾಯಿತು. ಈ ಸಂದರ್ಭ ಅಬ್ಬಾಸ್ ಉಚ್ಚಿಲ್ ಹಾಗೂ ಸಂಶುದ್ದೀನ್ ಉಚ್ಚಿಲ್ ಅವರು ಯೋಜನೆ ಸೇರ್ಪಡೆ ಬಗ್ಗೆ ಮಾಹಿತಿ ಕೇಳಿದರು. ಗ್ರಾಮಸ್ಥರೂ ಧ್ವನಿಗೂಡಿಸಿದರು. ಈ ವಿಷಯ ಈಗಾಗಲೇ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿ ತಲುಪಿದೆ ಎಂದು ಪಿಡಿಓ ಕೇಶವ ಪೂಜಾರಿ ತಿಳಿಸಿದರು. ಇನ್ನಷ್ಟು ಮಾಹಿತಿಗೆ ಗ್ರಾಮಸ್ಥರು ಒತ್ತಾಯಿಸಿದಾಗ ಪಂಚಾಯಿತಿರಾಜ್ ಇಲಾಖೆಯ ಇಂಜಿನಿಯರ್ ನಿತಿನ್ ಪ್ರತಿಕ್ರಿಯಿಸಿ ಈಗಾಗಲೇ ಯೋಜನೆಯಲ್ಲಿ ತಲಪಾಡಿ, ಕೋಟೆಕಾರ್, ಕುರ್ನಾಡು, ಉಳ್ಳಾಲ ಸಹಿತ ಮಂಗಳೂರು ಕ್ಷೇತ್ರದ ಎಲ್ಲಾ ಗ್ರಾಮಗಳನ್ನು ಸೇರಿಸಲಾಗಿದ್ದು, 119 ಕೋಟಿಯ ಯೋಜನೆ ಇದಾಗಿದೆ. ಯೋಜನೆ ಬಗ್ಗೆ ಎಸ್‍ಎಸ್‍ಸಿಸಿ ಸಭೆಯಲ್ಲೂ ಚರ್ಚಿಸಲಾಗಿದೆ ಎಂದು ಹೇಳಿದರು. ಇಕ್ಕದೆ ಅಬ್ಬಾಸ್ ಉಚ್ಚಿಲ್ ಆಕ್ಷೇಪಿಸಿ, ತನ್ನ ಬಳಿ ದಾಖಲೆಗಳಿದ್ದು, ಸುಳ್ಳು ಮಾಹಿತಿ ನೀಡಬೇಡಿ. ನಿಮ್ಮಲ್ಲಿರುವ ದಾಖಲೆಗಳನ್ನು ನೀಡಿ ಎಂದರು. ಇತ್ತೀಚೆಗಷ್ಟೇ ಯೋಜನೆಯನ್ನು ಸೇರಿಸಲಾಗಿದ್ದು, ಬಂಟ್ವಾಳ ವಿಭಾಗದಲ್ಲಿ ದಾಖಲೆಗಳಿರುವುದರಿಂದ ತನ್ನಲ್ಲಿಲ್ಲ. 15 ದಿನದ ಹಿಂದೆ ಪ್ರಕ್ರಿಯೆ ನಡೆದಿದ್ದು, ಈಗಿನ ದಾಖಲೆಗಳಲ್ಲಿ ಸ್ಪಷ್ಟ ಮಾಹಿತಿ ಸಿಗಲಿದೆ ಎಂದರು.

ಬೀದಿ ನಾಯಿಗಳ ಕಾಟದ ಕುರಿತು ಹಿಂದಿನ ಸಭೆಯಲ್ಲಿ ಕ್ರಮಕೈಗೊಳ್ಳುವ ಭರವಸೆ ನೀಡಲಾಗಿದ್ದರೂ, ಈಡೇರಿಲ್ಲ, ಇದನ್ನು ಪ್ರಶ್ನಿಸಿದ ಗ್ರಾಮಸ್ಥರೋರ್ವರು ಪಶು ಆಸ್ಪತ್ರೆ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮಸ್ಥ ಸಂಶುದ್ಧೀನ್ ಅವರ ಮನೆಯಲ್ಲಿ ಮೆಸ್ಕಾಂ ಸಿಬ್ಬಂದಿ ಮನೆಮಂದಿ ಜತೆಗೆ ಬಿಲ್ ನೀಡದಕ್ಕೆ ಉಡಾಫೆಯಿಂದ ವರ್ತಿಸಿದ್ದಾರೆ. ಅಲ್ಲದೆ ಮೆಸ್ಕಾಂ ಕಂಬದಲ್ಲಿ ಹಾಕಲಾಗಿರುವ ಟಿ.ವಿ. ಕೇ¨ಲ್ ಬಗ್ಗೆಯೂ ಮನೆಯವರನ್ನು ಪ್ರಶ್ನಿಸಿರುವುದು ಸಮಂಜಸವಲ್ಲ ಎಂದು ದೂರಿದಾಗ, ಮೆಸ್ಕಾಂ ಅಧಿಕಾರಿ ಪ್ರವೀಣ್ ಸಿಬ್ಬಂದಿಯನ್ನು ಬೆಂಬಲಿಸಲು ಮುಂದಾದಾಗ ತೀವ್ರ ವಾಗ್ವಾದ ನಡೆಯಿತು. ಕೊನೆಯಲ್ಲಿ ನೋಡೆಲ್ ಅಧಿಕಾರಿಯವರ ಸಮಾಧಾನದ ಮಾತುಗಳಿಗೆ ಮಣಿದ ಅಧಿಕಾರಿ ಸಿಬ್ಬಂದಿ ವಿರುದ್ಧ ನೋಟೀಸು ನೀಡುವ ಭರವಸೆಯನ್ನು ನೀಡಿದರು.

ಶಿಶು ಅಭಿವೃದ್ಧಿ ಇಲಾಖೆಯ ಶ್ಯಾಮಲಾ ನೋಡೆಲ್ ಅಧಿಕಾರಿಯಾಗಿದ್ದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಪಿಡಿಓ ಕೇಶವ ಪೂಜಾರಿ ಸ್ವಾಗತಿಸಿದರು. ಪಂಚಾಯಿತಿ ಕಾರ್ಯದರ್ಶಿ ತಲಪಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಾಂತಿ ಹಿಂದಿನ ಗ್ರಾಮಸಭೆಯ ನಿರ್ಣಯಗಳನ್ನು ಓದಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d