ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೋಟೆಕಾರು: ಗ್ರಾಮೀಣ ಭಾಗದ ರಸ್ತೆಗಳಿಗೆ ಮತ್ತು ಕುಡಿಯುವ ನೀರಿನ ಯೋಜನೆಗೆ ಜಿಲ್ಲಾ ಪಂಚಾಯಿತಿ ಹೆಚ್ಚಿನ ಒತ್ತು ನೀಡುತ್ತಿದ್ದು, ಸ್ಥಳೀಯರ ಸಹಕಾರದೊಂದಿಗೆ ಹಂತಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಅವರು ಮಾಡೂರು ಅರಸುನಗರ ಎರಡನೇ ಅಡ್ಡರಸ್ತೆಗೆ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಯ ರೂ.3 ಲಕ್ಷ ಅನುದಾನದೊಂದಿಗೆ ಆರಂಭವಾಗಲಿರುವ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ , ಕೋಟೆಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಕನೀರುತೋಟ, ಉಪಾಧ್ಯಕ್ಷೆ ಶಶಿಕಲಾ ಮೋಹನ್ ಭಂಡಾರಿ, ಪಂಚಾಯಿತಿ ಸದಸ್ಯರಾದ ರೋಹಿತ್ ಅಮೀನ್, ಅಮರನಾಥ್ ಮಾಡೂರು, ಸುಮಿತ್ರಾ, ಜಯಂತಿ ಹಾಗೂ ಮೋಹನ್ ಭಂಡಾರಿ, ಅಶೋಕ್ ಮಾಡೂರು, ನವೀನ್ ಗಟ್ಟಿ, ಅರ್ಜುನ್ ಮಾಡೂರು ಮೊದಲಾದವರು ಉಪಸ್ಥಿತರಿದ್ದರು.





