Site icon Ullalavani

ಮಾಡೂರು: ಶ್ರೀ ಶಿರಡಿ ಸಾಯಿ ಬಾಬಾ ಮಂದಿರ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಟೆಕಾರ್: ದೇವಸ್ಥಾನ ನಿರ್ಮಾಣದೊಂದಿಗೆ ಬ್ರಹ್ಮಕಲಶೋತ್ಸವ ಯಶಸ್ವಿಯಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ಆರ್ಥಿಕ ಶಕ್ತಿ ಕ್ರೋಡೀಕರಣ ಅಗತ್ಯ ಎಂದು ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು ಅಭಿಪ್ರಾಯಪಟ್ಟರು.

ಅವರು ಮಾಡೂರಿನ ಕೊಂಡಾಣ ಸಾಯಿಧಾಮ ಬಡಾವಣೆ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಬಿಂಬ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂದಿರದ ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಬಾಬು ಶ್ರೀಶಾಸ್ತ ಕಿನ್ಯ, ಪ್ರಧಾನ ಸಂಚಾಲಕ ಗೋಪಾಲ ಕುತ್ತಾರ್, ಮ್ಯಾನೆಜಿಂಗ್ ಟ್ರಸ್ಟಿ ಕೆ.ಪಿ. ಸುರೇಶ್, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರಿದಾಸ್, ಹೊರೆ ಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ದೇವದಾಸ್ ಕೊಲ್ಯ, ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲ ಉದಯ ಕುಮಾರ್ ಉಪಸ್ಥಿತರಿದ್ದರು.

ಬ್ರಹ್ಮ ಕಲಶೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಬಿ. ನಾರಾಯಣ ಕುಂಪಲ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕøತಿಕ ಸಮಿತಿ ಪ್ರಧಾನ ಸಂಚಾಲಕ ವಿದ್ಯಾಧರ್ ಶೆಟ್ಟಿ ವಂದಿಸಿದರು.

Exit mobile version