UN NETWORKS
ಉಳ್ಳಾಲ: ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿ ಹಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೊಗವೀರಪಟ್ನ ಬಳಿಯ ನಿವಾಸಿ ರಜನೀಶ್ (32) ಎಂಬಾತನನ್ನು ಬಂಧಿಸಲಾಗಿದೆ.
2017ರ, ಮಾ.26 ರಂದು ರಾತ್ರಿ 10 ಕ್ಕೆ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಮುನೀರ್ ಎಂಬವರಿಗೆ ಸೇರಿದ ಸಮೋಸಾ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬರುತ್ತಿದ್ದ ಉಳ್ಳಾಲ ನಿವಾಸಿ ನೌಷಾದ್ ಹುಸೈನ್ ಎಂಬವರು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ತಡೆದು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಘಟನೆ ನಂತರ ತಲಮರೆಸಿಕೊಂಡಿದ್ದ ಆರೋಪಿಗೆ ಪೊಲೀಸರು ಬಲೆ ಬೀಸಿದ್ದರಾದರೂ ಪತ್ತೆಯಾಗಿರಲಿಲ್ಲ.
ಸೋಮವಾರ ಖಚಿತ ಮಾಹಿತಿ ಮೇರೆಗೆ ಉಳ್ಳಾಲದಿಂದ ವಶಕ್ಕೆ ಪಡೆದುಕೊಂಡು ಬಳಿಕ ಬಂಧಿಸಿದ್ದಾರೆ. ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳದ ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.


