ಉಳ್ಳಾಲ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಜೋಕಟ್ಟೆಯ ಓರ್ವ ಉಸ್ತಾದರ ಅನಾರೋಗ್ಯದ ಸಮಸ್ಯೆಯನ್ನು ಮನಗಂಡು ಅವರ ಜೋಕಟ್ಟೆಯಲ್ಲಿರುವ ನಿವಾಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಾಯಕರು ಭೇಟಿ ನೀಡಿ ಅವರ ಆರೋಗ್ಯ ಸಮಸ್ಯೆ ಕುರಿತು ವಿಚಾರಿಸಿ ಹತ್ತು ಸಾವಿರ ರೂಪಾಯಿ ಧನ ಸಹಾಯ ನೀಡಿ ನೆರವಾದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ವಕ್ಪ್ ಸದಸ್ಯ ಹಾಗು ಎಸ್ ವೈ ಎಸ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಬಳ್ಳಾರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ನಾಯಕ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಉಪಸ್ಥಿತರಿದ್ದರು.