UN NETWORKS
ತೊಕ್ಕೊಟ್ಟು: ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ತೊಕ್ಕೊಟ್ಟು ಇದರ ಆಶ್ರಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ 2ನೇ ವರ್ಷದ ನಮ್ಮ ನಡಿಗೆ ಶಿವ ಕ್ಷೇತ್ರದೆಡೆಗೆ ತೊಕ್ಕೊಟ್ಟು ಒಳಪೇಟೆಯಿಂದ ಶ್ರೀ ಕ್ಷೇತ್ರ ಸೋಮೇಶ್ವರದವರೆಗೆ ನಡೆಯಿತು.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣ ಬಳಿ ನಡೆದ ಕಾರ್ಯಕ್ರಮಕ್ಕೆ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ ಚಾಲನೆ ನೀಡಿದರು. ಮಂಗಳೂರು ಜಿಲ್ಲಾ ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಶರತ್ ಕುಮಾರ್, ಶ್ರೀರಕ್ತೇಶ್ವರೀ ದೇವಸ್ಥಾನದ ಅಧ್ಯಕ್ಷ ಚಂದ್ರಕಾಂತ್, ಶ್ರೀ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಘವ ಉಚ್ಚಿಲ, ಉಳ್ಳಾಲ ಶ್ರೀ ಚೀರುಂಭ ಭಗವತೀ ದೇವಸ್ಥಾನದ ಉಪಾಧ್ಯಕ್ಷ ಸುರೇಶ್ ಭಟ್ನಗರ್, ಮೊಕ್ತೇಸರರಾದ ಮಾಧವ ಸುವರ್ಣ ಒಂಭತ್ತುಕೆರೆ, ದಾಮೋದರ ಉಳ್ಳಾಲ, ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ತಾಲೂಕು ಪಂಚಾಯತ್ ಸದಸ್ಯೆ ಸುರೇಖಾ ಚಂದ್ರಹಾಸ್ ಉಪಸ್ಥಿತರಿದ್ದರು.
ಪ್ರವೀಣ್ ಬಸ್ತಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಅಶೋಕ್ ಸಹಕರಿಸಿದರು.


