Site icon Ullalavani

ಯೇನೆಪೋಯ: ಹಲ್ಲುಗಳ ಆರೈಕೆಯ ಬಗ್ಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ

UN NETWORKS

ಉಳ್ಳಾಲ: ಯೇನೆಪೊಯ ನರ್ಸಿಂಗ್ ಕಾಲೇಜಿನ ಮಕ್ಕಳ ಶುಶ್ರುಷಾ ವಿಭಾಗ ಹಾಗು ಮಕ್ಕಳ ದಂತ ವೈದ್ಯಕೀಯ ವಿಭಾಗ ಯೇನೆಪೊಯ ದಂತ ವೈದ್ಯಕೀಯ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಹಲ್ಲುಗಳ ಆರೈಕೆಯ ಬಗ್ಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಯೇನೆಪೊಯ ದಂತ ವೈದ್ಯಕೀಯ ಕಾಲೇಜನಲ್ಲಿ ನಡೆಯಿತು.

ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಪತಿ ರಾವ್ ಹಾಗೂ ಉಪಪ್ರಾಂಶುಪಾಲ ಡಾ| ಶ್ಯಾಮ್ ಭಟ್, ಹಾಗೂ ಮಕ್ಕಳ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಪ್ರೊ| ಉಮರಾಣಿ ಜೆ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ರೆಸಿಡೆನ್ಸಿಯಲ್ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು, ಅರೋಗ್ಯ ಶಿಕ್ಷಣದ ನಂತರ ಮಕ್ಕಳಿಗೆ ಉಚಿತ ದಂತ ಚಿಕಿತ್ಸೆಯನ್ನು ನೀಡಲಾಯಿತು. ಸಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Exit mobile version