ಫೆ.15 ರಿಂದ ಫೆ.18 ರವರೆಗೆ ಕುತ್ತಾರು ಕ್ಷೇತ್ರದ ವಾರ್ಷಿಕೋತ್ಸವ
UllalaVani
UN NETWORKS
ಕುತ್ತಾರು: ಶ್ರೀ ಕ್ಷೇತ್ರ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ವರ್ಷಾವಧಿ ಮಹೋತ್ಸವ ಫೆ.15 ರಿಂದ ಫೆ.18 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಶ್ರೀ ಕ್ಷೇತ್ರದಲ್ಲಿ ಫೆ.16ರಂದು ಗಣಯಾಗ, ನವ ಕ¯ಶಾಭಿಷೇಕ, ಸಾಮೂಹಿಕ ಆಶ್ಲೇಷ ಬಲಿ, ಫೆ.17ರಂದು ಭಜನಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದುರ್ಗಾವಾಹಿನಿ ಮಹಿಳಾ ಮಂಡಳಿ ಇವರಿಂದ ನೃತ್ಯ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ಕ್ಕೆ ಶಾರದಾ ಆಟ್ರ್ಸ್ ತಂಡದ ಐಸಿರಿ ಕಲಾವಿದೆರ್ ಮಂಜೇಶ್ವರ ಅಭಿನಯಿಸುವ ಕುಸಲ್ದರಸೆ ನವೀನ್ ಡಿ.ಪಡೀಲ್ ನಿರ್ದೇಶನದ ಅಂಚಗೆ ಇಂಚಗೆ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.
ಫೆ.18 ರಂದು ಸಾಮೂಹಿಕ ಮಹಾ ಚಂಡಿಕಾಯಾಗ, ಶ್ರುತಿಲಯ ಕಲಾಕೇಂದ್ರ ಕುತ್ತಾರು ಇವರಿಂದ ನೃತ್ಯ ವೈವಿಧ್ಯ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.