UN NETWORKS
ಇರಾ: ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕಾ ಸಚಿವರು ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ರವರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಇರಾ ಗ್ರಾಮದ ಬಾಳೆಪುಣಿ ಸರ್ಕಾರಿ ಶಾಲೆಯ ಕ್ರೀಂಡಾಗಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ರವರು ಚಾಲನೆ ನೀಡಿದರು.
ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸರ್ಕಾರಿ ಶಾಲೆಗಳ ಮೂಲಭೂತ ಅಭಿವೃದ್ಧಿಗಳಿಗೆ ಸೂಕ್ತವಾಗಿ ಸ್ಪಂದಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದ್ದು ಊರರವರು ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಕೈಜೋಡಿಸಿದಾಗ ಇನ್ನಷ್ಟು ಪ್ರಗತಿ ಸಾಧ್ಯ ಎಂದರು.
ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ರವರು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನವನ್ನು ದೊರಕಿಸಿ ಕೊಡುವುದರಲ್ಲಿ ಪ್ರಮಾಣಿಕವಾಗಿ ಪ್ರಯತ್ನಿಸುವುದಾಗಿ ಸಂಧರ್ಭೊಚಿತವಾಗಿ ತಿಳಿಸಿದರು.
ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ.ಉಮ್ಮರ್,ಸೆಫಿಯಾ,ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಹಸೈನಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹಾಜಿ.ಸಿ.ಎಚ್.ಮಹಮ್ಮದ್,ಶಾಲಾ ಮುಖ್ಯ ಶಿಕ್ಷಕಿ ಸವಿತಾ,ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಅಝೀಝ್,ಸ್ಥಳೀಯ ಗಣ್ಯರಾದ ಹಾಜಿ ಇಬ್ರಾಹಿಂ,ಸೈಯದ್ ಬಡದಲ,ಮುಯಿದಿನ್ ಕುಂಞ,ಟಿಪ್ಪು,ಬಿ.ಪಿ ಮೊಯಿದು ಕುಂಞ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.




