UN NETWORKS
ಉಳ್ಳಾಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ಕ ಜಿಲ್ಲಾ ವತಿಯಿಂದ ತಲಪಾಡಿಯಲ್ಲಿ ಅಮಾಯಕ ವಿದಾರ್ಥಿಗಳ ಮೇಲೆ ನಡೆದ ಹಲ್ಲೆಯ ವಿರುದ್ದ ಪ್ರತಿಭಟನೆಯನ್ನು ತಲಪಾಡಿ ಬಸ್ ನಿಲ್ದಾಣದ ಬಳಿ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷರಾದ ಇಮ್ರಾನ್ ಪಿಜೆ ಪ್ರಾಸ್ತವಿಕವಾಗಿ ಮಾತನಾಡಿ ಘಟನೆಗೆ ಸಂಬಂದಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದಂತ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಫಯಾಝ್ ದೊಡ್ಡಮನೆ ಮಾತನಾಡಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆಗಳು ಮಿತಿಮೀರುತ್ತಿದ್ದು ಭಯದ ವಾತಾವಾರಣ ನಿರ್ಮಾಣವಾಗಿದೆ. ಅದರಲ್ಲೂ ಕೇರಳ ಮೂಲದ ವಿದ್ಯಾರ್ಥಿಗಳನ್ನು ಗುರಿಪಡಿಸಲಾಗುತ್ತಿದೆ ಪರಿಣಾಮ ಇದು ಎರಡು ರಾಜ್ಯಗಳ ಮಧ್ಯೆ ಬಿಕ್ಕಟ್ಟನ್ನು ಸೃಷ್ಟಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು ಅಲ್ಲದೆ ಸಂಬಂದಪಟ್ಟ ಜನಪ್ರತಿನಿಧಿಗಳು ಕೇವಲ ಮಸೀದಿ ಮಂದಿರಗಳನ್ನು ಸುತ್ತುವುದು ಬಿಟ್ಟು ತಮ್ಮ ಜವಾಬ್ದಾರಿಯನ್ನು ಅರಿತು ವಿದ್ಯಾರ್ಥಿಗಳ ನೋವನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವತ್ತಾ ಕಾರ್ಯೋನ್ಮುಖರಾಗಿ ಎಂದು ಸಲಹೆ ನೀಡಿದರು ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮಾತನಾಡಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಲು ಕ್ಯಾಂಪಸ್ ಫ್ರಂಟ್ ಕಟಿಬದ್ದವಾಗಿದೆ ಎಂದು ಭರವಸೆ ನೀಡಿದರು ಸಾಹುಲ್ ಕೊಣಾಜೆ ಕಾರ್ಯಕ್ರಮವನ್ನು ನಿರೂಪಿಸಿದರು ನಿಝಾಮ್ ಸ್ವಾಗತಿಸಿ ವಂದಿಸಿದರು


