UN NETWORKS
ಬಬ್ಬುಕಟ್ಟೆ: ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ನೀಡುವ ವಿದ್ಯೆ, ಧಾರ್ಮಿಕ ಸಂಸ್ಥೆಗಳಲ್ಲಿ ಧರ್ಮಗುರುಗಳು ನೀಡುವ ಬೋಧನೆಯಿಂದಲೇ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ಓರ್ವ ವ್ಯಕ್ತಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕಾದರೆ ಲೌಕಿಕ ಮಾತ್ರವಲ್ಲ ಧಾರ್ಮಿಕ ಶಿಕ್ಷಣವೂ ಪಡೆಯುವುದು ಮುಖ್ಯ, ಅಂತಹ ಕೆಲಸ ಶಾಂತಿ ಶಿಕ್ಷಣ ಸಂಸ್ಥೆಯಿಂದ ನಡೆಯುತ್ತಿದೆ. ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿರುವ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನೂ ಜಾತ, ಧರ್ಮವಿಲ್ಲದೆ ನೀಡಿದ್ದು, ಶೇ.90ರಷ್ಟು ಕೆಲಸ ಮುಗಿದಿದೆ ಎಂದು ಹೇಳಿದರು.
ಈ ಸಂದರ್ಭ ಉಳ್ಳಾಲ ನಗರಸಭಾಧ್ಯಕ್ಷ ಹುಸೈನ್ ಕುಂಞಮೋನು, ಉಪಾಧ್ಯಕ್ಷೆ ಚಿತ್ರಾಕ್ಷಿ, ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಸದಸ್ಯರಾದ ಫಾರೂಕ್ ಉಳ್ಳಾಲ್, ಇಸ್ಮಾಯಿಲ್ ಪೊಡಿಮೋನು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್, ನಗರಸಭೆಯ ಪೌರಾಯುಕ್ತೆ ವಾಣಿ ವಿ.ಆಳ್ವ, ಸಹಾಯಕ ಅಭಿಯಂತರ ಉಮೇಶ್ ಕಾಮತ್, ಶಾಂತಿ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ರಹ್ಮಾನ್, ಸುಮಯ್ಯ ಮಸೀದಿ ಅಧ್ಯಕ್ಷ ಇಲ್ಯಾಸ್ ಇಸ್ಮಾಯಿಲ್, ಪ್ರಮುಖರಾದ ಯು.ಪಿ.ಅಯೂಬ್ ಮಂಚಿಲ, ಯು.ಆರ್.ನಝೀರ್ ಕೋಡಿ, ಗುತ್ತಿಗೆದಾರ ಯು.ಕೆ.ಯೂಸುಫ್, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಕೋಟೆಪುರ ಜುಮಾ ಮಸೀದಿ ಅಧ್ಯಕ್ಷ ಯು.ಕೆ.ಅಬ್ಬಾಸ್ ಇನ್ನಿತರರು ಉಪಸ್ಥಿತರಿದ್ದರು.